Connect with us

DAKSHINA KANNADA

ಸುಳ್ಯದಲ್ಲಿ ಜೋಕಾಲಿಯ ಹಗ್ಗ ಬಿಗಿದು ಬಾಲಕ ಸಾವು

Published

on

ಸುಳ್ಯ: ಬಾಲಕನೊಬ್ಬ ಆಟವಾಡುತ್ತಿರುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಸುಳ್ಯದ ಚೆಂಬು ಗ್ರಾಮ ಎಂಬಲ್ಲಿ ನಡೆದಿದೆ.

ಸಾವನ್ನಪ್ಪಿದ ಹತ್ತು ವರ್ಷದ ಬಾಲಕ ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಎಂದು ತಿಳಿದು ಬಂದಿದೆ. ಬುಧವಾರ ಸಂಜೆ ಮನೆಯಲ್ಲಿ ತಾಯಿ ಸೀರೆಯಲ್ಲಿ ಜೋಕಾಲಿ ಆಟವಾಡುತ್ತಿರುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬಾಲಕನ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ತಿಳಿಯಲಾಗಿದೆ.

DAKSHINA KANNADA

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

Published

on

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ  ಕೆಜಿಎಫ್  ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.

ಇದನ್ನೂ ಓದಿ : ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್

ತಂಡಕ್ಕೆ ದೈಹಿಕ ಶಿಕ್ಷಕರಾದ  ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ವೆನ್ಲಾಕ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ; ಸಾ*ವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ಮಹಿಳೆ

Published

on

ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ  ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು.

ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು  ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು.

ಶಿವಮೊಗ್ಗ ರಾಗಿಗುಡ್ಡ ನಿವಾಸಿ,  ರೇಖಾ (41) ಅಂಗಾಂಗ ದಾನ ಮಾಡಿರುವ ಮಹಿಳೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೇಖಾ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಜ.6 ರಂದು ದಾಖಲಿಸಲಾಗಿತ್ತು. ಆದರೆ, ಬ್ರೈನ್ ಡೆಡ್ ಆದ ಹಿನ್ನೆಲೆ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.

ಇದನ್ನೂ ಓದಿ : ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶ*ವ ಪತ್ತೆ!

ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿರೋದು ವಿಶೇಷ.

Continue Reading

DAKSHINA KANNADA

ಮಂಗಳೂರು : ತಣ್ಣೀರು ಬಾವಿ ಬೀಚ್ ಪ್ರವಾಸಿಗರಿಗೆ ವಿಶೇಷ ಸೌಲಭ್ಯಗಳು

Published

on

ಮಂಗಳೂರು : ನಗರದ ತಣ್ಣೀರು ಬಾವಿ ಬೀಚ್‌ ಅಭಿವೃದ್ಧಿ ಕೆಲಸಗಳು ‘ಒನ್ ನೇಷನ್ ಒನ್ ಡೆಸ್ಟಿನೇಷನ್’ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ತಣ್ಣೀರು ಬಾವಿ ಬೀಚ್‌ನಲ್ಲಿ 7.59 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗೆ ನೀಡಿತ್ತು. ಅಂತೆಯೇ ಪುಣೆ ಮೂಲದ ಬಿವಿಜಿ ಇಂಡಿಯಾ ಲಿಮಿಟೆಡ್‌ ಎಂಬ ಕಂಪನಿಯು 7.56 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು, ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಹಿಲನ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಲಭ್ಯವಿರುವ ಸೌಲಭ್ಯಗಳ ಪಟ್ಟಿ :

ತಣ್ಣೀರು ಬಾವಿ ಬೀಚ್‌ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಬೀಚ್‌ಗೆ ಬರುವ ಪ್ರವಾಸಿಗರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗದಿ ಮಾಡುವ ಪ್ರವೇಶ ಶುಲ್ಕವನ್ನು ವಸೂಲಿ ಮಾಡುವ ಅವಕಾಶವನ್ನು ಟೆಂಡರ್ ಪಡೆದವರಿಗೆ ನೀಡಲಾಗುತ್ತದೆ. ಸದ್ಯ ಬೀಚ್ ನಿರ್ವಹಣೆ ಮಾಡುವ ಗುತ್ತಿಗೆ ಅವಧಿ ಅಂತ್ಯವಾಗಿದೆ. ಆದ್ದರಿಂದ ಹೊಸ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಷ್ಟು ದಿನ ತಣ್ಣೀರು ಬಾವಿ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಮರ ಗಿಡಗಳ ಉದ್ಯಾನವನ ಪ್ರಮುಖ ಆಕರ್ಷಣೆಯಾಗಿತ್ತು. ಸಸಿಹಿತ್ಲು, ಪಣಂಬೂರು ಬೀಚ್‌ಗೆ ಹೋಲಿಕೆ ಮಾಡಿದರೆ ಇಲ್ಲಿ ಹೆಚ್ಚಿನ ಆಕರ್ಷಣೆಗಳು, ಸೌಲಭ್ಯಗಳು ಇಲ್ಲ ಎಂಬ ಆರೋಪವಿತ್ತು. ಆದ್ದರಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಬೇಕಾದ ಸೌಲಭ್ಯಗಳನ್ನು ಕೈಗೊಳ್ಳಲಾಗಿದೆ.

ಬೀಚ್ ಆವರಣದಲ್ಲಿ ಆಹಾರ ಮಳಿಗೆಗಳು, ಸಮುದ್ರ ವೀಕ್ಷಣೆ ಮಾಡಲು ಫ್ರೇಮ್ ಮುಂತಾದ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಾಡಲಾಗುತ್ತಿದೆ. ಬೀಚ್‌ನಲ್ಲಿ ಬಿದಿರು ಮನೆಗಳು ನಿರ್ಮಾಣವಾಗಿದ್ದು, ಪ್ರವಾಸಿಗರಿಗೆ ವಿಶೇಷ ಅನುಭವವನ್ನು ನೀಡಲಿವೆ. ಬೀಚ್‌ನಲ್ಲಿ ಹುಲ್ಲಿನ ಕೊಡೆಗಳ ಕೆಳಗೆ ಕುಳಿತು ಸಮುದ್ರ ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಬೀಚ್ ಕಸ ನಿರ್ವಹಣೆಗೆ ಘನತ್ಯಾಜ್ಯ ನಿರ್ವಹಣೆ ಘಟಕ, ಶೌಚಾಲಯಗಳ ನಿರ್ವಹಣೆ, ಬಟ್ಟೆ ಬದಲಾಯಿಸುವ ಕೊಠಡಿ, ಬಿದಿರಿನ ತಾತ್ಕಾಲಿಕ ಮನೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬೀಚ್‌ನಲ್ಲಿ ಒದಗಿಸಲಾಗಿದೆ. ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಚಿಕಿತ್ಸೆ ಕೊಠಡಿ, ಸಿಸಿಟಿವಿ ಕ್ಯಾಮರಾ ನಿಯಂತ್ರಣ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಬೀಚ್ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Continue Reading

LATEST NEWS

Trending

Exit mobile version