Connect with us

BANTWAL

ಬಂಟ್ವಾಳದಲ್ಲಿ ಮದುವೆಯಾಗುತ್ತೇನೆಂದು ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದವನ ಬಂಧನ

Published

on

ಮಂಗಳೂರು: ವಿವಾಹಿತೆಯೋರ್ವಳನ್ನು ಬೆದರಿಸಿ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಅಯ್ಯೂಬ್ ಎಂಬಾತನನ್ನು ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ

ಬಿ.ಸಿ.ರೋಡಿನ ತಲಪಾಡಿಯ ವಿವಾಹಿತ ಮಹಿಳೆಯೊರ್ವಳಿಗೆ ಇನ್ಸ್ಟಾಗ್ರಾಂ ನಲ್ಲಿ ಮೊಹಮ್ಮದ್ ಅಯ್ಯೂಬ್ ಎಂಬಾತನು ಪರಿಚಯ ಮಾಡಿಕೊಂಡಿದ್ದು, ನಂತರ ಆತನು ಮಹಿಳೆಯ ಮೊಬೈಲ್ ನಂಬರ್ ಪಡೆದುಕೊಂಡು ಕರೆ ಮಾಡಿ ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಮ್ಮನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದನು. ಮಹಿಳೆ ಈ ಬಗ್ಗೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಇತ್ತೀಚಿಗೆ ಬಿ.ಸಿ.ರೋಡ್ ಪೇಟೆಯ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ಮೊಹಮ್ಮದ್ ಅಯ್ಯೂಬ್ ತನ್ನ ಕಾರಿನಲ್ಲಿ ಬಂದು ಒತ್ತಾಯಿಸಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಪೇಟೆಗೆ ಬಿಡುತ್ತೇನೆ ಎಂದು ಹೇಳಿ, ಮಂಗಳೂರಿನ ವಿವಿಧ ಕಡೆ ಸುತ್ತಾಡಿಸಿ ಮೊಬೈಲ್ ನಲ್ಲಿ ಪೋಟೋ ಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟುಹೋಗಿದ್ದ.
ಆದರೆ ಈ ವಿಚಾರವನ್ನು ಯಾರಲ್ಲಿಯೂ ತಿಳಿಸದಂತೆಯೂ, ಯಾರಲ್ಲಿಯಾದರೂ ಹೇಳಿದರೆ ನಿನಗೆ ತೊಂದರೆಯಾದಿತ್ತು ಎಂದು ಬೆದರಿಸಿರುವುದಲ್ಲದೆ ತನ್ನನ್ನು ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಬೆದರಿಕೆ ಹಾಕಿದ್ದ.
ಅ ಬಳಿಕ ಮಾರ್ಚ್ ನಲ್ಲಿ ಮೊಹಮ್ಮದ್ ಅಯ್ಯೂಬ್ ನು ಮಹಿಳೆ ಯ ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ಗಮನಿಸಿ ಮನೆಗೆ ಬಂದು ಅತ್ಯಾಚಾರ ಮಾಡಿದ್ದಾನೆ. ಈ ವಿಚಾರವನ್ನು ಯಾರಲ್ಲಿಯೂ ತಿಳಿಸದಂತೆಯೂ ತನ್ನಲ್ಲಿದ್ದ ಮೊಬೈಲ್ ಪೋಟೋಗಳನ್ನು ವೈರಲ್ ಮಾಡುವುದಾಗಿಯೂ ಬೆದರಿಸಿರುತ್ತಾನೆ. ಸದ್ಯ ಮೊಹಮ್ಮದ್ ಅಯ್ಯೂಬ್ ನ ಉಪಟಲ ತಾಳಲಾರದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.
ಪ್ರಸ್ತುತ ಸಂತ್ರಸ್ತ ಮಹಿಳೆ ದೂರಿನಂತೆ ಆರೋಪಿಯನ್ನು ಬಂಧಿಸಿಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending