BELTHANGADY
ಬೆಳ್ತಂಗಡಿ: ಸಾಲಬಾಧೆಗೆ ಕಂಗೆಟ್ಟು ಯುವ ಕೃಷಿಕ ಜೀವಾಂತ್ಯ…
ಬೆಳ್ತಂಗಡಿ: ಯುವ ಕೃಷಿಕರೊಬ್ಬರು ವಿಷ ಸೇವಿಸಿದ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯಾಯತರ್ಪು ಸಮೀಪದ ಹಾಕೋಟೆಯ ಬರೆಮೇಲು ಎಂಬಲ್ಲಿ ನಡೆದಿದೆ.
ಇಲ್ಲಿನ ಬರೆಮೇಲು ಮನೆ ನಿವಾಸಿ ವಿಜಯ ಗೌಡ (37) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ದುರ್ದೈವಿಯಾಗಿದ್ದಾರೆ.
ವಿಜಯ ಗೌಡರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ವಿಷಯ ತಡವಾಗಿ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ.
ಮೃತರು ಅವಿವಾಹಿತ ಹಾಗೂ ಉತ್ತಮ ಕೃಷಿಕರಾಗಿದ್ದರು.ಸ್ಥಳೀಯರ ಕೃಷಿ ಜಮೀನುಗಳಲ್ಲಿ ವಿವಿಧ ಬಗೆಯ ತರಕಾರಿ ಬೆಳೆಗಳನ್ನು ಬೆಳೆಯುತ್ತಿದ್ದರು.
ಯಾವುದೇ ದುಶ್ಚಟಗಳಿಲ್ಲದೇ ಜೀವನ ನಡೆಸುತ್ತಿದ್ದರು. ಕಳೆದ 5 – 6 ವರ್ಷಗಳ ಹಿಂದೆ ಕೃಷಿಯಲ್ಲಿ ನಿರತರಾಗಿದ್ದಾಗ ಕಾಲಿಗೆ ಬಲವಾದ ಗಾಯವಾಗಿದ್ದ ಸಂದರ್ಭದಲ್ಲಿ ಕಾಲಿನ ಭಾಗವನ್ನು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇತ್ತೀಚಿಗೆ ಮತ್ತೆ ಕಾಲು ನೋವು ಉಲ್ಬಣಗೊಂಡು ತೊಂದರೆ ಅನುಭವಿಸುತ್ತಿದ್ದರು.
ಹಾಗೂ ತರಕಾರಿ ಕೃಷಿಯಲ್ಲಿಯೂ ನಷ್ಟ ಅನುಭವಿಸಿ,ಸಾಲಭಾಧೆಯಿಂದ ಕೆಂಗಟ್ಟಿ ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
BELTHANGADY
ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತ; ಫುಲ್ ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮವಾಗಿ ಚಾರ್ಮಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಧಾರಾಕಾರ ಮಳೆಯಿಂದ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದ್ದು, ಹೀಗಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಹಿಂದಕ್ಕೂ ಹೋಗದೇ, ಮುಂದಕ್ಕೆ ಹೋಗದೆ ಮಧ್ಯವೇ ಪರದಾಡುವಂತಾಗಿದೆ.
ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಕ್ಕಿಂಜೆ, ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಜಲಮಯವಾಗಿದೆ. ನೆರಿಯಾ, ಪುಲ್ಲಾಜೆ ಸೇತುವೆಗಳು ಮುಳುಗಡೆಯಗಿದೆ.
ಚಾರ್ಮಾಡಿಯ 3ನೇ ತಿರುವಿನಲ್ಲಿ ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
BELTHANGADY
ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ
ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್ನ ಎಟಿಎಂ ಕೇಂದ್ರದಲ್ಲಿ ನಡೆದಿದೆ.
ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು ಹಿಂದಿಯಲ್ಲಿ ಮಾತಾಡಿ ಸಹಾಯಕ್ಕೆ ಬಂದಿದ್ದರು. ಅಬಾಬಕ್ಕರ್ ಸಹಾಯದ ಅಗತ್ಯ ಇಲ್ಲ ಎಂದು ಹೇಳಿದರೂ, ಒಳಗಡೆಯೇ ನಿಂತಿದ್ದರು. ಮಧ್ಯಾಹ್ನ 12 ಗಂಟೆಗೆ ಹಣ ತೆಗೆದು ಎಟಿಎಂ ಕೇಂದ್ರದಿಂದ ಕಾರ್ಡ್ ಸಹಿತ ಹೊರಗೆ ಹೋಗಿದ್ದರು. ನಂತರ ಅ.4 ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ಹೋದಾಗ ಕಾರ್ಡ್ ರೀಡ್ ಆಗಲಿಲ್ಲ.
ಅನುಮಾನದಿಂದ ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಎಟಿಎಂ ಕಾರ್ಡ್ ಬದಲಾಗಿದೆ ಎಂದು ತಿಳಿಸಿದ್ದು, ನಂತರ ಬ್ಯಾಲೆನ್ಸ್ ಚೆಕ್ ಮಾಡಿದಾಗ ಖಾತೆಯಲ್ಲಿದ್ದ 49,200 ರೂ. ಅನ್ನು ವಂಚಿಸಿರುವುದು ಗೊತ್ತಾಯಿತು.
ಅ.2 ರಂದು ಎಟಿಎಂ ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ಎಟಿಎಂ ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ, ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಈ ಮೂಲಕ ಕೋರಲಾಗುತ್ತಿದೆ.
ಸಂಪರ್ಕಿಸಬೇಕಾದ ಸಂಖ್ಯೆ: 08256-232093
BELTHANGADY
ಉಕ್ಕಿ ಹರಿದ ನದಿಗಳು; ರಾತ್ರೋ ರಾತ್ರಿ ಭಯಾನಕ ವಾತವರಣ ಸೃಷ್ಠಿ
ಬೆಳ್ತಂಗಡಿ: ಅಚಾನಕ್ಕಾಗಿ ಬಂದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಜನರು ಆತಂಕಕ್ಕೊಳಗಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ (ಅ.8) ರಾತ್ರಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಚಾರ್ಮಾಡಿ, ದಿಡುಪೆ, ನೆರಿಯ ಭಾಗದ ನದಿಗಳಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ರಸ್ತೆಗೆ ನೀರು ನುಗ್ಗಿದೆ.
ನೆರಿಯಾದಲ್ಲಿ ಸೇತುವೆ ಮುಳುಗಡೆಯಾಗಿದಲ್ಲದೆ ಅಲ್ಲಲ್ಲಿ ರಸ್ತೆಗೆ ತೋಟಗಳಿಗೆ ನೀರು ನುಗ್ಗಿದೆ. ಇದರಿಂದ ನದಿ ತೀರದ ಜನರಲ್ಲಿ ಆತಂಕ ಉಂಟಾಗಿದೆ. ಸ್ಥಳೀಯರು ಹೇಳುವಂತೆ 2019 ರ ನೆರೆಯ ನಂತರ ಮಂಗಳವಾರ ರಾತ್ರಿ ನದಿಗಳಲ್ಲಿ ಅತೀ ಹೆಚ್ಚು ನೀರು ಬಂದಿದೆ. ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೆ ನೀರಿನ ಮಟ್ಟ ಏರಿಕೆ ಕಂಡಿದ್ದು ಮತ್ತೆ ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- LATEST NEWS6 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- FILM3 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- BIG BOSS7 days ago
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
- DAKSHINA KANNADA5 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು