Connect with us

    BELTHANGADY

    ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ ಯುವತಿ ನಾಪತ್ತೆ

    Published

    on

    ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ನಡೆದಿದೆ.

    ಇಲ್ಲಿನ ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಕುಮಾರಿ ಪ್ರಮೀಳಾ (18) ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾದ ಯುವತಿಯಾಗಿದ್ದಾಳೆ.


    ನವೆಂಬರ್ 21 ತಾರೀಕಿನಂದು ಮನೆಯಿಂದ ಕೆಲಸಕ್ಕೆ ಹೊರಟ ಪ್ರಮೀಳಾ ಕೆಲಸಕ್ಕೂ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕನ್ನಡ,ತುಳು ಮಾತನಾಡುವ ಈಕೆ ಆಕಾಶ ನೀಲಿ ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಲೆಗ್ಗಿನ್ಸ್ ಪ್ಯಾಂಟ್ ಧರಿಸಿದ್ದಾಳೆ.

    ಈಕೆ ಎಲ್ಲಿಯಾದರೂ ಕಂಡುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256232093 ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending