Thursday, October 21, 2021

ವಿಟ್ಲ: ಡೆತ್‌ನೋಟ್‌ ಬರೆದಿಟ್ಟು ಕೆರೆಗೆ ಹಾರಿ ಯುವತಿ ಆತ್ಮಹತ್ಯೆ- ಹಲವರ ಹೆಸರು ಉಲ್ಲೇಖ

ವಿಟ್ಲ: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.

ನಿಶ್ಮಿತಾ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ.


ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...