ಮುಲ್ಕಿ: ಬಸ್ಸುನಿಲ್ದಾಣದಲ್ಲಿ ಯುವಕನೋರ್ವ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೆಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ಬಸ್ ನಿಲ್ದಾಣದಲ್ಲಿ ನಡೆದಿದೆ.
ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿ ನಿವಾಸಿ ಮೂಲತಃ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ದಿಂಡವಾರ ಗ್ರಾಮದ ಲಗ್ಮಣ್ಣ (23) ಮೃತ ಯುವಕ.
ಮೃತ ಯುವಕ ಕೂಲಿ ಕೆಲಸ ಮಾಡುತ್ತಿದ್ದು ರಾತ್ರಿ ಊಟ ಮಾಡಿ ಬಸ್ ನಿಲ್ದಾಣದಲ್ಲಿ ಮಲಗಿದ್ದು ದಂಡೆಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.