LATEST NEWS
ಇವನೆಂಥಾ ಪಾಪಿ: ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ತಳ್ಳಿದ ಯುವಕ-ದಾರುಣ ಅಂತ್ಯ..!
ಚೆನ್ನೈ: ಕಾಲೇಜು ವಿದ್ಯಾರ್ಥಿನಿಯನ್ನು ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ದೂಡಿ ಹಾಕಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ಚೆನ್ನೈನ ಸೈಂಟ್ ತೋಮಸ್ ಮೌಂಟ್ ರೈಲು ನಿಲ್ದಾಣದಲ್ಲಿ ನಿನ್ನೆ ನಡೆದಿದೆ.
ಚೆನ್ನೈನ ಅಲಂದೂರು ನಿವಾಸಿ ಡಿ. ಸತೀಶ್ (23)ಯುವತಿಯನ್ನು ರೈಲಿನಡಿಗೆ ತಳ್ಳಿದ ಆರೋಪಿ.
ಅದೇ ಊರಿನ ವಿದ್ಯಾರ್ಥಿನಿ ಎಂ. ಸತ್ಯ ಕೊಲೆಯಾದ ದುರ್ದೈವಿ.
ವಿದ್ಯಾರ್ಥಿನಿ ಎಂ. ಸತ್ಯ ಚೆನ್ನೈ ಬೀಚ್ ಕಡೆಗೆ ತೆರಳುವ ರೈಲಿಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಆರೋಪಿ ಹಿಂಬದಿಯಿಂದ ಬಂದು ಆಕೆಯನ್ನು ಪ್ಲಾಟ್ಫಾರಂನಿಂದ ಕೆಳಕ್ಕೆ ದೂಡಿದ್ದಾನೆ.
ಈ ಸಂದರ್ಭದಲ್ಲಿ ಕಾಲುಗಳು ಮುಗ್ಗರಿಸಿ ಆಕೆ ರೈಲು ಹಳಿಗಳ ಮೇಲೆ ಬಿದ್ದಿದ್ದು, ರೈಲು ಆಕೆಯ ಪಾದಗಳ ಮೇಲೆ ಚಲಿಸಿದೆ ಹಾಗೂ ಆಕೆ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾಳೆ.
ಮೃತ ಯುವತಿ ಸ್ಥಳೀಯ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದು, ಆರೋಪಿ ಯುವಕ 8 ನೇ ತರಗತಿಯಲ್ಲಿ ಶಾಲೆಯನ್ನು ಆರ್ಧದಲ್ಲಿ ಬಿಟ್ಟವನಾಗಿದ್ದಾನೆ.
ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಭರ ಮಗನಾಗಿದ್ದ ಆತ ವಿದ್ಯಾರ್ಥಿನಿಯನ್ನು ಏಕ ಮುಖವಾಗಿ ಪ್ರೀತಿಸುತ್ತಿದ್ದನು ಎನ್ನಲಾಗಿದೆ.
ವಿದ್ಯಾರ್ಥಿನಿ ಸತ್ಯ ಅವಳ ತಾಯಿ ಹೆಡ್ ಕಾನ್ಸ್ ಟೇಬಲ್ ಆಗಿರುತ್ತಾರೆ.
ಸತ್ಯ ಅವಳಿಗೆ ತಿಂಗಳ ಹಿಂದೆ ಬೇರೆ ಯುವಕನ ಜತೆ ವಿವಾಹ ನಿಶ್ಚಿತಾರ್ಥವಾಗಿತ್ತು.
ಈ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿ ಸತೀಶ್ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಮಾಂಬಳಂ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
LATEST NEWS
60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.
ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಅನೇಕರು ಆಕೆ ಮಿಸ್ ಯುನಿವರ್ಸ್ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್ಗಳನ್ನು ಹಾಕುತ್ತಿದ್ದಾರೆ.
LATEST NEWS
ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.
ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.
ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
LATEST NEWS
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ