Connect with us

LATEST NEWS

ಕೇರಳ: ವೃದ್ಧೆಯನ್ನೂ ಬಿಡದ ಕಾಮುಕ-ಹಿರಿ ಜೀವ ದುರಂತ ಅಂತ್ಯ

Published

on

ಪತ್ತನಂತಿಟ್ಟ: ಯುವಕನಿಂದ ವೃದ್ಧೆಯೊಬ್ಬರು ಅತ್ಯಾಚಾರಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕೇರಳದ ಅಂಬಾಲಪುಳದಲ್ಲಿ ನಡೆದಿದೆ.

ಥೋಪುಂಪಡಿ ನಿವಾಸಿ ಸುನೀಶ್​ ಅಲಿಯಾಸ್​ ಅಪ್ಪು (22) ಬಂಧಿತ ಆರೋಪಿ.


ಆರೋಪಿಯು ಮೇ 25ರಂದು ​ಮನೆಯ ಕಂಪೌಂಡ್ ಹತ್ತಿ ಬಂದಿದ್ದು ಮನೆಯ ಬಾಗಿಲು ಬಡಿದಿದ್ದ. ಯಾರೆಂದು ನೋಡಲು ಈ ಹಿರಿ ಜೀವ ಬಾಗಿಲು ತೆರೆದಾಗ ಒಂದೇ ಸಮನೆ ಅತ್ಯಾಚಾರ ಮಾಡಿದ್ದಾನೆ.

ಪರಿಣಾಮವಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆಯನ್ನು ಸಂಬಂಧಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ನರ್ಸ್​ ಬಳಿ ನಡೆದ ಎಲ್ಲ ಘಟನೆಯನ್ನು ವೃದ್ಧೆಯೇ ವಿವರಿಸಿದ್ದಾರೆ.

ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಘಟನೆ ನಡೆದ ಮೂರು ದಿನಗಳ ನಂತರ ಕೊನೆಯುಸಿರೆಳೆದಿದ್ದಾರೆ.

ಸಾವಿಗೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರವೇ ದೃಢಪಡಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

Bantwala:ನಿಯಂತ್ರಣ ತಪ್ಪಿ ಮೈಲು ಕಲ್ಲಿಗೆ ಕಾರು ಢಿಕ್ಕಿ..!

Published

on

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯಲ್ಲಿ ಹಾಕಿದ ಮಣ್ಣಿನ ಮೇಲೆ ಹತ್ತಿ ಮೈಲು ಕಲ್ಲಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಮಾಣಿ ಕಡೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮಣ್ಣಿನ ರಾಶಿ ಮೇಲೆ ಏರಿತ್ತು. ಈ ವೇಳೆ ಕಾರನ್ನು ನಿಯಂತ್ರಣಕ್ಕೆ ತರುವಲ್ಲಿ ಚಾಲಕ ಯಶಸ್ವಿ ಆದ ಕಾರಣ ದೊಡ್ಡ ಅನಾಹುತ ತಪ್ಪಿತ್ತು. ಆದರೆ ರಸ್ತೆ ಬದಿಯಲ್ಲಿದ್ದ ಮೈಲು ಕಲ್ಲಿಗೆ ಢಿಕ್ಕಿ ಹೊಡೆದು ಕಾರು ನಿಂತ ಕಾರಣ ಕಾರಿಗೆ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಕಾರು ಚಾಲಕನಿಗೂ ಸಣ್ಣ ಪುಟ್ಟ ಗಾಯವಾಗಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರಯಾಗಿದ್ದು, ಕಾರು ನಿಯಂತ್ರಣ ತಪ್ಪಿದ ದೃಶ್ಯ ಕಂಡು ಬಂದಿದೆ.

Continue Reading

LATEST NEWS

ಖಾಸಗಿ ಶಾಲೆಗೆ ನಾಡಗೀತೆ ಅನ್ವಯವಿಲ್ಲ- ಕನ್ನಡ ಸಂಸ್ಕೃತಿ ಇಲಾಖೆ ಆದೇಶ..!

Published

on

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಆದೇಶಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಆದೇಶ ಹೊರಡಿಸಿದ್ದು ಸದ್ಯ ಇದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳಿಗೂ ಇದು ಅನ್ವಯ ಆಗಿತ್ತು. ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.  ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರೀಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಸಂಸ್ಕೃತಿ ಇಲಾಖೆ ಯಾಕೆ ಈ ನಿರ್ಧಾರ ತಗೆದುಕೊಂಡಿದೆ ಅವರು ಉತ್ತರ ಕೊಡಬೇಕಾಗುತ್ತೆ . ಎಲ್ಲಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡುತ್ತೇವೆ ಹಾಗೂ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ಹೇಳಿದರೆ ಒಳ್ಳೆಯದು ಎಂದು ಹೇಳಿದ್ದಾರೆ. ನಾಡಗೀತೆ ಕಡ್ಡಾಯವಲ್ಲ ಎಂದು ಮಾಡಿದ್ದರೆ ನಾನು ಮಾರ್ಪಾಡು ಮಾಡಿಸುತ್ತೇನೆ ಹಾಗೂ ನಾನು ನಮ್ಮ ಇಲಾಖೆಯಲ್ಲಿ ನಾಡಗೀತೆ ಕಡ್ಡಾಯ ಅಂತ ಮಾಡಿಸುತ್ತೇನೆ ಎಂದು ಪ್ರತಿಕ್ರೀಯೆ ನೀಡಿದ್ದಾರೆ.

Continue Reading

DAKSHINA KANNADA

Kadaba: ಕರ್ತವ್ಯದಲ್ಲೇ ವಿಎಗೆ ಬಸ್ ಸೀಟ್ ಅಡಿಯಲ್ಲಿ ಸಕತ್ ನಿದ್ರೆ..!

Published

on

ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ.

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ ಅಮಲಿನಲ್ಲಿ ಬಸ್ ನಲ್ಲಿ ಬಿದ್ದುಕೊಂಡಿದ್ದಾನೆ. ಇದೆಲ್ಲಾ ನಡೆದದ್ದು, ಸುಬ್ರಹ್ಮಣ್ಯ- ಕಡಬ ಬಸ್ ನಲ್ಲಿ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ವಿಎ ನಾಗಸುಂದರ ಕುಡಿದು ಬಸ್ ಸೀಟ್ ಅಡಿಯಲ್ಲಿ ಮಲಗಿ ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಸಿದ್ದ. ಹೀಗಾಗಿ ಬಸ್ ಚಾಲಕ ನೆರವಾಗಿ ಬಸ್ಸನ್ನು ಕಡಬ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ಸ್ಟೇಷನ್ ಪೊಲೀಸರ ಸಹಾಯದಿಂದ ವಿಎ ಯನ್ನು ಇಳಿಸಿ ಬಸ್ ಮುಂದೆ ಹೋಗಿದೆ. ಬಳಿಕ ಹಲವರು ಸೇರಿ ವಿಎಯನ್ನು ಆತನ ನಿವಾಸದ ಹೊರಗೆ ಮಲಗಿಸಿ ಬಂದಿದ್ದಾರೆ. ವಿಎ ನಾಗಸುಂದರ ಈ ಹಿಂದೆಯೂ ಹಲಾವರು ಬಾರಿ ಕುಡಿದು ರಸ್ತೆಯಲ್ಲಿ ಬಿದ್ದು ಇದೇ ರೀತಿ ವರ್ತಿಸಿ ಹಿರಿಯ ಅಧಿಕಾರಿಗಳಿಂದ ತರಾಟೆಗೆ ಒಳಗಾಗಿದ್ದ. ಆದರೆ ಇತ್ತೀಚೆಗೆ ಇದು ಈತನ ನಿತ್ಯ ಕಾಯಕ ಎಂಬಂತಾಗಿದ್ದು ಈತನ ಈ ಚಟದಿಂದ ಹಲವು ದಾಖಲೆ ಪತ್ರ ಕಳೆದು ಹಾಕಿದ್ದಾನೆ ಎಂಬ ಆರೋಪವೂ ಇದೆ. ಈತನ ವಿಚಾರ‌ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ಈ ವಿಎಯನ್ನು ವರ್ಗಾವಣೆ ಮಾಡಿ ಇಲ್ಲ ಮದ್ಯವರ್ಜನ ಶಿಬಿರದಲ್ಲಾದ್ರೂ ಬಿಡಿ ಅನ್ನೋದು ಸ್ಥಳಿಯರ ಮನವಿ.

Continue Reading

LATEST NEWS

Trending