Connect with us

    chikkamagaluru

    ಭಾರತೀಯ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ..!

    Published

    on

    ಚಿಕ್ಕಮಗಳೂರು: ಯುವಕನೋರ್ವ ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿಯ ಕಿಗ್ಗಾದ ಯಡದಾಳು ಗ್ರಾಮದಲ್ಲಿ ನಡೆದಿದೆ.


    ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಡೆತ್ ನೋಟ್ ನಲ್ಲಿ ಭಾರತೀಯ ಸೇನೆಯ ಪರೀಕ್ಷೆಯಲ್ಲಿ ನಾನು ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಬರೆದಿಟ್ಟಿದ್ದಾರೆ. ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಸೇನಾ ನೇಮಕಾತಿ ಪರೀಕ್ಷೆಯ ರಿಸಲ್ಟ್ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಘಟನೆ ಬೆಳಕಿಗೆ ಬಂದಿದೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    chikkamagaluru

    ಮುಳ್ಳಯ್ಯನಗಿರಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..!

    Published

    on

    ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಹೈದರಾಬಾದ್ ಮೂಲದ ಐವರು ಪ್ರವಾಸಿಗರು ಮುಳ್ಳಯ್ಯನಗಿರಿ ವೀಕ್ಷಣೆಗೆ ಬಂದಿದ್ದರು. ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಕ್ಷಣ ಘಟನೆ ವೀಕ್ಷಿಸಿದ ಕೆಲವರು ಪ್ರಪಾತಕ್ಕೆ ಬಿದ್ದಿದ್ದ ಪ್ರವಾಸಿಗರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಗಾಯಾಳುಗಳನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    chikkamagaluru

    ಗೈರು ಹಾಜರಾದ ವಿದ್ಯಾರ್ಥಿಗಳಿಂದ ಹಣ ವಸೂಲಿ ಸಂಚು; ತಾವು ಬೀಸಿದ ಬಲೆಗೆ ತಾವೇ ಸಿಕ್ಕಿಬಿದ್ದ ಆರೋಪಿಗಳು

    Published

    on

    ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


    ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ.ಹರೀಶ್‌ ಮುಖಾಂತರ ಹಣದ ಬೇಡಿಕೆಯನ್ನಿಟ್ಟಿದ್ದ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.
    ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್‌ ಪೇ ಮೂಲಕ 10 ಸಾವಿರ ಹಾಗೂ ಪ್ರಾಂಶುಪಾಲ ಎಂ.ಕೆ.ಪ್ರವೀಣ್ ಕುಮಾರ್‌ 5 ಸಾವಿರ ರೂ. ಕಸಿದುಕೊಂಡಿರುವುದಾಗಿ ಪ್ರಕರಣ ದಾಖಲಾಗಿದೆ.
    ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್‌, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.

    Continue Reading

    LATEST NEWS

    Trending