Sunday, November 27, 2022

ವಿಟ್ಲ: ಕೆಲಸ ಕೊಡಿಸುವ ಆಮಿಷವೊಡ್ಡಿ ಭಿನ್ನ ಕೋಮಿನ ಯುವತಿಯರೊಂದಿಗೆ ಸುತ್ತಾಡುತ್ತಿದ್ದ ಯುವಕ-ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಭಿನ್ನಕೋಮಿನ ಯುವತಿಯರೊಂದಿಗಿದ್ದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲದ ಕುಡ್ತಮುಗೇರು ಸಮೀಪದ ಪಡಾರು ಬೊಳ್ಳಾದೆ ಎಂಬಲ್ಲಿ ನಡೆದಿದೆ.


ಬೆಳ್ಪಾದೆ ಸಮೀಪ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೋರ್ವ ಇರುವ ಬಗ್ಗೆ ಮಾಹಿತಿ ಅರಿತ ಸಾರ್ವಜನಿಕರು ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ಯುವತಿಯರನ್ನು ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಅವರೆಲ್ಲರೂ ಕೇರಳ ಮೂಲದವರು ಎನ್ನಲಾಗುತ್ತಿದೆ.

ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...