DAKSHINA KANNADA
ಭಜರಂಗದಳದ ಕಾರ್ಯಕರ್ತನನ್ನೇ ವರಿಸಿದ ಮುಸ್ಲಿಂ ಯುವತಿ..!!
ಮಂಗಳೂರು: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತಿದ ಭಜರಂಗದಳದಲ್ಲೇ ಇದೀಗ ಅಂತರ್ಧರ್ಮೀಯ ವಿವಾಹವಾದ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.
ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಹಿಂದೂ ಸಂಘಟನೆಯ ಪ್ರಶಾಂತ್ ಭಂಡಾರಿ ಹಾಗೂ ಮುಸ್ಲಿಂ ಯುವತಿ ಆಯೇಷಾ ಎಂಬವರು ಮದುವೆಯಾಗಿದ್ದಾರೆ. ನ. 30 ರಂದು ಸುರತ್ಕಲ್ ನಿವಾಸಿ ಆಯೇಷಾ ಎಂಬ ಯುವತಿಯ ಜೊತೆ ಪ್ರಶಾಂತ್ ತೆರಳಿದ್ದ ಎಂದು ತಿಳಿದುಬಂದಿದೆ. ಆದರೆ ಮದುವೆಯಾಗಲು ಹೊರಟಿರುವ ಪ್ರಶಾಂತ್ ಈ ಹಿಂದೆ ದೀಪಕ್ ರಾವ್ ಹತ್ಯೆಯ ಆರೋಪಿ ಪಿಂಕಿ ನವಾಜ್ ಎಂಬಾತನ ಹತ್ಯೆಗೆ ಯತ್ನಿಸಿರುವ ಪ್ರಕರಣ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಈತ ಸುರತ್ಕಲ್ ನ ಮುಸ್ಲಿಂ ಯುವತಿಯ ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ ಯುವತಿಯ ಪೋಷಕರು ಆಯೇಷಾ ನಾಪತ್ತೆಯಾಗಿದ್ದಳೆಂದು ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದಾರೆ.
BANTWAL
ಯಕ್ಷಸಿರಿ ಪ್ರಶಸ್ತಿಗೆ ದಿವಾಕರ್ ದಾಸ್ ಕಾವಳಕಟ್ಟೆ ಆಯ್ಕೆ
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಶನಿವಾರ(ಸೆ.14) ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ದಿವಾಕರ್ ದಾಸ್ ಕಾವಳಕಟ್ಟೆ ಇವರ ಬಗ್ಗೆ:
ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಶ್ರುತಿ ಆರ್ಟ್ಸ್ ಸಂಸ್ಥೆಯ ಸಂಸ್ಥಾಪಕ, ಯಕ್ಷಗಾನ ಕಲಾವಿದ, ಸಂಘಟಕ ದಿವಾಕರ ದಾಸ್ ಕಾವಳಕಟ್ಟೆ. ಯಕ್ಷ ಕಲೆಯನ್ನು ಅತ್ಯಂತ ಒಲವಿನಿಂದ ಮೈಗೂಡಿಸಿಕೊಂಡು ಬೆಳೆಸುತ್ತ ಬೆಳೆದವರು.
ಕಳೆದ 30 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದನಾಗಿ, ತರಬೇತುದಾರನಾಗಿ, ಯಕ್ಷಗಾನ ಸಂಘಟಕನಾಗಿ, ತಲಕಲ, ಕಾಂತಾವರ, ಸುರತ್ಕಲ್, ಮಂಗಳಾದೇವಿ ಮೇಳಗಳಲ್ಲಿ 14 ವರ್ಷ ಸ್ತ್ರೀ ವೇಷದಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕಾವಳಕಟ್ಟೆಯಲ್ಲಿ ಶೃತಿ ಆರ್ಟ್ಸ್ ಕಲಾ ಸಂಸ್ಥೆ ಸ್ಥಾಪಿಸಿ ಕಲಾ ಪ್ರದರ್ಶನಗಳಿಗೆ ಬೇಕಾದ ವೇಷಭೂಷಣ ತಯಾರಿಸಿ, ಕರ್ನಾಟಕ ರಾಜ್ಯದ ಬಹುತೇಕ ಪ್ರಸಾದನ ಸಂಸ್ಥೆ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ ಹಾಗೂ ಕಲಾ ತಂಡಗಳಿಗೆ ವೇಷಭೂಷಣ ಒದಗಿಸಿರುವ ಇವರು ವಿದ್ಯಾರ್ಥಿಗಳಿಗೆ, ಯಕ್ಷಗಾನ ಆಸಕ್ತರಿಗೆ ನಾಟ್ಯ ಮತ್ತು ಅರ್ಥಗಾರಿಕೆಯ ತರಬೇತಿ ನೀಡಿದ್ದಾರೆ. ಅಲ್ಲದೇ ತೆಂಕುತಿಟ್ಟಿನ ಹೆಚ್ಚಿನ ಯಕ್ಷಗಾನ ಮೇಳಗಳಿಗೆ ವೇಷಭೂಷಣವನ್ನು ತಯಾರಿಸಿ ಕೊಡುತ್ತಿದ್ದಾರೆ.
ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರನ್ನು ಒಟ್ಟು ಸೇರಿಸಿ ಅಲ್ಲಲ್ಲಿ ಯಕ್ಷಗಾನ, ತಾಳಮದ್ದಳೆ ಕೂಟಗಳನ್ನು ಸಂಘಟಿಸುತ್ತಿರುವ ಇವರು ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಯಕ್ಷಗಾನ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ, ಹಂಪಿ ಉತ್ಸವದಲ್ಲಿ ಯಕ್ಷಗಾನ ಪ್ರದರ್ಶನ, ವಿಶ್ವ ಯುವಜನ ಮೇಳದಲ್ಲಿ ಯಕ್ಷಗಾನ ಪ್ರದರ್ಶನ, ರಾಜ್ಯ ಮಟ್ಟದ ಯುವಜನ ಮೇಳಗಳಲ್ಲಿ ಯಕ್ಷಗಾನ ಪ್ರದರ್ಶನ, ಆಫ್ರೀಕಾ ಶೃಂಗಸಭೆ, ದೆಹಲಿಯಲ್ಲಿ ಯಕ್ಷಗಾನ ನೃತ್ಯ ರೂಪಕ, ಮೈಸೂರು ದಸರಾ ಉತ್ಸವಗಳಲ್ಲಿ ಯಕ್ಷಗಾನ ಕಾರ್ಯಕ್ರಮಗಳನ್ನು ಪ್ರದರ್ಶಿಸಿದ್ದಾರೆ. 2014ರಲ್ಲಿ ಸರಕಾರದ ಉದ್ಯೋಗ ಖಾತರಿ ಯೋಜನೆಯ ಜಾಗೃತಿ ಯಕ್ಷಗಾನ ಪ್ರದರ್ಶನ ನೀಡಿರುವ ಇವರು ಕೆದ್ದಳಿಕೆ ಸರಕಾರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಶಾಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸುವಲ್ಲಿ ಪ್ರಯತ್ನಿಸಿದ್ದಾರೆ.
ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಸಾಧನಾಶ್ರೀ ಪ್ರಶಸ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುವರ್ಣ ಕರ್ನಾಟಕ ಜಯಂತಿ ಪ್ರಶಸ್ತಿ, ಕೆದ್ದಳಿಕೆ ಶಾಲೆಯ ಎಸ್.ಡಿ.ಎಂ.ಸಿ.ಗೆ ರಾಜ್ಯ ಮಟ್ಟದ ಉತ್ತಮ ಅಧ್ಯಕ್ಷ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಗೌರವ, ಉತ್ತಮ ಸ್ತ್ರೀ ವೇಷಧಾರಿ ಪ್ರಶಸ್ತಿ ಸೇರಿ ಸುಮಾರು 60ಕ್ಕೂ ಹೆಚ್ಚಿನ ಪ್ರಶಸ್ತಿಗಳು ಲಬಿಸಿವೆ.
DAKSHINA KANNADA
ಶ್ರೀಮತಿ ಶೆಟ್ಟಿ ಭೀಕರ ಕೊ*ಲೆ ಪ್ರಕರಣ : ಮೂವರ ಅಪರಾಧ ಸಾಬೀತು
ಮಂಗಳೂರು : ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ ಕೊ*ಲೆ ಪ್ರಕರಣದ ಮೂವರು ಆರೋಪಿಗಳ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಶುಕ್ರವಾರ ತೀರ್ಪು ನೀಡಿದ್ದಾರೆ.
ಮಂಗಳೂರಿನ ವೆಲೆನ್ಸಿಯಾ ಸಮೀಪದ ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್ ಯಾನೆ ಜೋನಸ್ ಜೌಲಿನ್ ಸ್ಯಾಮ್ಸನ್ (40), ವಿಕ್ಟೋರಿಯಾ ಮಥಾಯಿಸ್ (47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಈ ಪ್ರಕರಣದ ಅಪರಾಧಿಗಳು. ಈ ಪೈಕಿ ರಾಜು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆತನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜೋನಸ್ ಮತ್ತು ವಿಕ್ಟೋರಿಯಾ ಜೈಲಿನಲ್ಲಿಯೇ ಇದ್ದಾರೆ.
ಏನಿದು ಪ್ರಕರಣ?
ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ (42) ಅವರು ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದರು. ಜತೆಗೆ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. ಈ ಕುರಿ ಫಂಡ್‌ನಲ್ಲಿ ಜೋನಸ್ ಸ್ಯಾಮ್ಸನ್ 2 ಸದಸ್ಯತ್ವ ಹೊಂದಿದ್ದು, ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು.
2019ರ ಮೇ 11ರಂದು ಬೆಳಗ್ಗೆ 9.15ಕ್ಕೆ ಹಣ ಕೇಳುವುದಕ್ಕಾಗಿ ಶ್ರೀಮತಿ ಶೆಟ್ಟಿ ಅವರು ಆರೋಪಿ ಜೋನಸ್ ಸ್ಯಾಮ್ಸನ್‌ನ ಮನೆಗೆ ತೆರಳಿದ್ದರು. ಅಲ್ಲಿ ಸ್ಯಾಮ್ಸನ್ ಮರದ ಪಟ್ಟಿಯ ತುಂಡಿನಿಂದ ಶ್ರೀಮತಿ ಶೆಟ್ಟಿ ತಲೆಗೆ ಹೊ*ಡೆದಿದ್ದ. ಪ್ರಜ್ಞಾಹೀನರಾಗಿದ್ದ ಶ್ರೀಮತಿ ಶೆಟ್ಟಿ ಅವರನ್ನು ಜೋನಸ್ ಮತ್ತು ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದೊಯ್ದು ಹರಿತವಾದ ಕತ್ತಿಯಿಂದ ಕುತ್ತಿಗೆ ಕೊ*ಯ್ದು ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ದೇಹವನ್ನು ಒಟ್ಟು 29 ತುಂಡು ಮಾಡಿ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಎಸೆದಿದ್ದರು.
ಇದನ್ನೂ ಓದಿ : ಸಾಹಸಕ್ಕೆ ಕೈ ಹಾಕಿದ ; ಪ್ರಾಣ ಪಕ್ಷಿಯೇ ಹಾರಿ ಹೋಯಿತು
ಜೋನಸ್ ಮತ್ತು ವಿಕ್ಟೋರಿಯಾ ಮೇಲಿನ ಕೊ*ಲೆ, ಸು*ಲಿಗೆ ಮತ್ತು ಸಾಕ್ಷ್ಯನಾಶ ಆರೋಪಗಳು ಹಾಗೂ ರಾಜು ಮೇಲಿನ ಕೊ*ಲೆಗೆ ಸಹಾಯ, ಕಳವು ಮಾಡಿರುವ ಸೊತ್ತುಗಳನ್ನು ಇಟ್ಟುಕೊಂಡಿರುವ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಸಪ್ಟೆಂಬರ್ 17ಕ್ಕೆ ನಿಗದಿಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೆಟ್ ಕ್ರಾಸ್ತಾ ಅವರು ಸಾಕ್ಷಿಗಳನ್ನು ವಿಚಾರಣೆ ಮಾಡಿ ವಾದ ಮಂಡಿಸಿದ್ದರು.
DAKSHINA KANNADA
ಸಾಹಸಕ್ಕೆ ಕೈ ಹಾಕಿದ ; ಪ್ರಾಣ ಪಕ್ಷಿಯೇ ಹಾರಿ ಹೋಯಿತು
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸಾಹಸಕ್ಕೆ ಕೈ ಹಾಕೋರ ಸಂಖ್ಯೆ ಕಡಿಮೆಯೇನಿಲ್ಲ. ರೀಲ್ಸ್, ಫೋಟೋ ಹುಚ್ಚಿಗೆ ತಮ್ಮ ಪ್ರಾಣವನ್ನೇ ಬಲಿಕೊಡುತ್ತಿದ್ದಾರೆ. ಮಂಗಳೂರಿನಲ್ಲೂ ಅಂತಹುದೇ ಘಟನೆ ನಡೆದಿದೆ. ಹಾವು ಹಿಡಿಯಲು ಹೋಗಿ ಓರ್ವ ತನ್ನ ಉಸಿರು ಚೆಲ್ಲಿದ್ದಾರೆ. ಗುರುವಾರ(ಸೆ.12) ಬಜಪೆಯಲ್ಲಿ ಈ ಘಟನೆ ನಡೆದಿದೆ.
ರಾಮಚಂದ್ರ ಪೂಜಾರಿ (55) ಮೃತ ವ್ಯಕ್ತಿ.
ರಾಮಚಂದ್ರ ಹಾವೊಂದನ್ನು ಕಂಡು ಅದು ವಿಷರಹಿತ ಎಂದು ಭಾವಿಸಿ ಹಿಡಿದಿದ್ದಾರೆ. ಅಸಲಿಗೆ ಅದು ವಿಷಪೂರಿತ ಕನ್ನಡಿ ಹಾವಾಗಿತ್ತು. ರಾಮಚಂದ್ರ ಹಿಡಿದಾಗ ಹಾವು ಅವರ ಕೈಗೆ ಕಚ್ಚಿದೆ. ಇದನ್ನು ಗಂಭೀರವಾಗಿ ಪರಿಗಣಿಸದೆ ಅವರು ಮನೆಗೆ ತೆರಳಿದ್ದರು. ಸಂಜೆಯಾಗುತ್ತಲೇ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೆ.13) ಮೃತಪಟ್ಟಿದ್ದಾರೆ.
- LATEST NEWS5 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- FILM4 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- LATEST NEWS3 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ
- FILM4 days ago
ರೇಣುಕಾಸ್ವಾಮಿ ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ..!