DAKSHINA KANNADA
ಪಾಪನಾಶಿನಿ ನದಿಗೆ ಬಲಿಯಾದರೇ ಕೈಕಾಲು ತೊಳೆಯಲು ಹೋದ ಯುವಕರು..!
ಉಡುಪಿ:ಬಾವಿ ಕೆಲಸ ಮುಗಿಸಿ ಕೈಕಾಲು ತೊಳೆಯಲು ಪಾಪ ನಾಶಿನಿ ಹೊಳೆಗೆ ಇಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ 4 ಗಂಟೆ ಸುಮಾರಿಗೆ ಬೆಳ್ಳೆ ಗ್ರಾಪಂ ವ್ಯಾಪ್ತಿಯ ಪಾಂಬೂರು ಅಮಾಸೆಕರಿಯ ಸೇತುವೆ ಸಮೀಪ ನಡೆದಿದೆ. ಮೃತರನ್ನು ಕಟಪಾಡಿ ಸುಭಾಸ್ ನಗರದ ಸರಕಾರಿಗುಡ್ಡೆ ನಿವಾಸಿ ಅಬ್ದುಲ್ ಸತ್ತಾರ್ ಎಂಬವರ ಮಗ ಮುಹಮ್ಮದ್ ಜಾಬೀರ್(18), ಇಕ್ಬಾಲ್ ಮುಸ್ತಾಕ್ ಎಂಬವರ ಮಗ ಮುಹಮ್ಮದ್ ರಿಝ್ವಾನ್(18) ಮತ್ತು ಶಂಕರಪುರ ಮೂಡಬೆಟ್ಟು ನಿವಾಸಿ ಲಿಗೋರಿ ಕ್ಯಾಸ್ತಲಿನೋ ಎಂಬವರ ಮಗ ಕೆಲ್ವಿನ್ ಕ್ಯಾಸ್ತಲಿನೋ(19) ಎಂದು ಗುರುತಿಸಲಾಗಿದೆ.
ಉಳಿದಂತೆ ಸರಕಾರಿಗುಡ್ಡೆಯ ಲತೀಫ್(19), ಅಶ್ಫಕ್(18) ಹಾಗೂ ಕುರ್ಕಾಲಿನ ಸಂಕೇತ್(18) ಎಂಬವರು ಅಪಾಯದಿಂದ ಪಾರಾಗಿದ್ದಾರೆ.
ಕೆಲ್ವಿನ್ ಬೇಕರಿಯಲ್ಲಿ, ಜಾಬೀರ್ ಗ್ಯಾರೇಜಿನಲ್ಲಿ ಮತ್ತು ಉಳಿದವರು ಪೈಟಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ ಇವರೆಲ್ಲ ಕಳೆದ ನಾಲ್ಕು ದಿನಗಳಿಂದ ಶಿರ್ವ ಮಟ್ಟಾರಿನಲ್ಲಿ ಬಾವಿಯ ಕೆಲಸಕ್ಕೆ ಹೋಗುತ್ತಿದ್ದರು.
ಭಾನುವಾರ ಬಾವಿ ಕೆಲಸ ಮುಗಿಸಿ ಬೈಕಿನಲ್ಲಿ ವಾಪಾಸ್ಸು ಬರುತ್ತಿದ್ದ ಇವರು, ಕೈಕಾಲು ತೊಳೆಯಲು ಹೊಳೆಯ ಬಳಿ ಹೋಗಿದ್ದರೆನ್ನ ಲಾಗಿದೆ.
ಈ ವೇಳೆ ಮೊದಲು ಕೆಲ್ವಿನ್ ಆಯತಪ್ಪಿ ನೀರಿಗೆ ಬಿದ್ದಿದ್ದು, ಆತನೊಂದಿಗೆ ರಿಝ್ವಾನ್ ಮತ್ತು ಜಾಬೀರ್ ಕೂಡ ನೀರಿಗೆ ಬಿದ್ದರೆನ್ನಲಾಗಿದೆ. ಈಜು ಬಾರದ ಈ ಮೂವರು ನೀರಿನಲ್ಲಿ ಮುಳುಗುತ್ತಿದ್ದಾಗ ಈಜು ಬರುತ್ತಿದ್ದ ಲತೀಫ್ ಇವರನ್ನು ಕಾಪಾಡಲು ಪ್ರಯತ್ನಿಸಿದ ಎನ್ನಲಾಗಿದೆ. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಬಳಿಕ ಸ್ಥಳೀಯರು ಆಗಮಿಸಿ ಹುಡುಕಾಟ ನಡೆಸಿದ್ದು, ಸಂಜೆ 5.30ರ ಸುಮಾರಿಗೆ ಮುಳುಗು ತಜ್ಞರಾದ ಈಶ್ವರ್ ಮಲ್ಪೆ, ನಮಿತ್ ಶೆಟ್ಟಿ ಪಡುಬೆಳ್ಳೆ ಮೃತದೇಹವನ್ನು ಮೇಲಕ್ಕೆತ್ತಿರುವುದಾಗಿ ತಿಳಿದು ಬಂದಿದೆ.
ಸತ್ತಾರ್ ಅವರ ಮೂವರು ಮಕ್ಕಳಲ್ಲಿ ಜಾಬೀರ್ ಕೊನೆಯವನಾಗಿದ್ದು, ಇಬ್ಬರು ಅಕ್ಕಂದಿರು ಇದ್ದಾರೆ. ಅದೇ ರೀತಿ ರಿಝ್ವಾನ್ ಕೂಡ ಕೊನೆಯವನಾಗಿದ್ದು, ಆತನಿಗೆ ಓರ್ವ ಅಕ್ಕ ಇದ್ದಾರೆ.
ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಆಗಮಿಸಿ, ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ಉಡುಪಿ ಜಿಲ್ಲಾ ಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್