Thursday, February 9, 2023

ಪಡುಬಿದ್ರಿ: ಪಾಳು ಬಾವಿಯಲ್ಲಿ ಯುವತಿ ಶವ ಪತ್ತೆ-ಲವ್ ಮ್ಯಾರೇಜ್ ಆದ್ರೂ ಸಂಬಂಧದಲ್ಲಿ ಬಿರುಕು..?

ಪಡುಬಿದ್ರಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಸಂಶಯಾಸ್ಪದವಾಗಿ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಡುಬಿದ್ರಿಯ ಪಣಿಯೂರಿನಲ್ಲಿ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಕ್ಷಿತ (24) ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಘಟಿಸಿದ್ದು, ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.


ಎರಡು ವರ್ಷದ ಹಿಂದೆ ಪಣಿಯೂರು ನಾರಾಯಣ ಪೂಜಾರಿಯವರ ಮಗಳು ರಕ್ಷಿತ ಮತ್ತು ಸಂಜಯ ಆಚಾರಿ ಅವರೊಂದಿಗೆ ಪ್ರೇಮ ವಿವಾಹವಾಗಿದ್ದು, ಕೆಲ ಸಮಯದಿಂದ ಇವರ ಸಂಬಂಧದಲ್ಲಿ ಒಡಕು ಉಂಟಾಗಿದ್ದು, ಶನಿವಾರ ಸಂಜೆ ರಕ್ಷಿತಾಳ ಮೃತದೇಹ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾಗಿದೆ.

ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತದೇಹವನ್ನು ಬಾವಿಯಿಂದ ಹೊರತೆಗೆಯಲು ಯಶವಂತ ಶೆಟ್ಟಿ, ಸೂರಿ ಶೆಟ್ಟಿ ಸಹಕರಿಸಿದ್ದು, ಪಡುಬಿದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...