Friday, August 19, 2022

‘ನಿಮ್ದೆ ಸರ್ಕಾರ, ನಿಮ್ದೆ ಜಾರ್ಜ್ ಆಗ ಏನ್ ಕ್ರಮ ಕೈಗೊಂಡ್ರಿ’- ನಳಿನ್ ಪ್ರಶ್ನೆ

ಮಂಗಳೂರು: ‘ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲೂ ಡೆತ್ ನೋಟ್ ಸಿಕ್ಕಿಲ್ಲ. ಕೇವಲ ವಾಟ್ಸಪ್‌ ಸಂದೇಶ ಹರಿದಾಡಿದ್ದು ಮಾತ್ರ ಸಿಕ್ಕಿರೋದು. ಹಾಗಾದ್ರೆ ನಿಮ್ಮ ಸರ್ಕಾರದಲ್ಲಿ ಜಾರ್ಜ್‌ನ್ನು ಏಕೆ ಬಂಧಿಸಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.


ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ‘ಸಿದ್ಧರಾಮಯ್ಯ ಸರ್ಕಾರ ಇರುವಾಗ 24 ಹಿಂದು ಕಾರ್ಯಕರ್ತರ ಹತ್ಯೆ ಆಗಿದೆ.

ಆ ಘಟನೆಯಲ್ಲಿ ಸಿದ್ದರಾಮಯ್ಯನವರನ್ನು ಜೈಲಿಗೆ ಕಳುಹಿಸಬೇಕಾಗಿತ್ತು. ಹಗರಣವೊಂದರಲ್ಲಿ ಬೇಲ್‌ ಮೇಲೆ ಇರುವ ಅಧ್ಯಕ್ಷರು ಅವರು. ಅವರು ಕೂಡ ಒಳಗಿರಬೇಕು’ ಎಂದು ಕಿಡಿಕಾರಿದರು.

ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ ಅವರು ‘ಅಲ್ಲದೇ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಾಪಡ್ ಮೇಲೆ ಹತ್ತು ಕೇಸ್ ಗಳಿದ್ದು ಅವರನ್ನು ನೀವು ಜೈಲಿಗೆ ಹಾಕಬೇಕು. ಕಾಂಗ್ರೆಸ್ ನವರು ಜೈಲಿನ ಒಳಗಡೆ ಹೋರಾಟ ಮಾಡಬೇಕೇ ಹೊರತು ಹೊರಗೆ ಅಲ್ಲ.

ಕಾಂಗ್ರೆಸ್ ನವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಇವರಿಗೆ ಯಾವ ನೈತಿಕತೆಯೂ ಇಲ್ಲ’, ತನಿಖೆ ನಡೆಯುತ್ತಿದೆ. ಎಲ್ಲ ಸತ್ಯಾಸತ್ಯತೆಗಳು ಬಯಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

Hot Topics

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...