Saturday, August 20, 2022

ಮಂಗಳೂರು ಬೈಕಂಪಾಡಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ..!

ಮಂಗಳೂರು : ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಬೀಚ್ ರೋಡಿನಲ್ಲಿ ಇಂದು ಸಂಜೆ ನಡೆದಿದೆ.

ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್‌ ಬಂಗೇರ ಎನ್ನುವವರನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ರಾಜು ಅವರನ್ನು ನಗರದ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜು ಬಂಗೇರ ಎರಡು – ಮೂರು ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಮ್ರಮುಖ ಆರೋಪಿ ಆಗಿದ್ದ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics