LATEST NEWS
ಭಟ್ಕಳದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ..! ಆರೋಪಿಗಳು ಪರಾರಿ
Published
3 years agoon
By
Adminಭಟ್ಕಳ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಟ್ಕಳ ಮುಷಾ ನಗರದ ಬದ್ರಿಯಾ ಕಾಲೊನಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಸದ್ದಾಂ ಹುಸೇನ್ ತಾಲ್ಲೂಕಿನ ಜಾಲಿ ರೋಡ್ ನಿವಾಸಿ ಎಂದು ತಿಳಿದು ಬಂದಿದೆ.
ಈತ ಬದ್ರಿಯಾ ಕಾಲೋನಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದ ವೇಳೆ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರದಿಂದ ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಹಲ್ಲೆಯಿಂದ ಸದ್ದಾಂ ಹುಸೇನ್ ಕೈ ಕಾಲು ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಾಗಳಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ನಡೆದ ಸ್ಥಳದ ಅಕ್ಕ ಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲಿಸಿ ನಡೆಸಿದ್ದು ಆರೋಪಿಗಳು ಮಂಗಳೂರು ಮೂಲದವರು ಎಂದು ಶಂಕಿಸಲಾಗಿದೆ.
ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !
Published
8 minutes agoon
22/12/2024By
NEWS DESK3ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್ ನ ಎಂಸಿಜಿಯಲ್ಲಿ ಡಿ.26ರಂದು ಆರಂಭವಾಗಲಿದೆ. ಈಗಾಗಲೇ ಸರಣಿ 1-1ರಿಂದ ಸಮಬಲವಾಗಿದ್ದು, ಮುನ್ನಡೆಗಾಗಿ ಉಭಯ ತಂಡಗಳು ಸಿದ್ದತೆಯಲ್ಲಿದೆ.
ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಅದುವೇ ಗಾಯಾಳುಗಳ ಸಮಸ್ಯೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.
ಇದನ್ನೂ ಓದಿ: ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.
ಕೆ.ಎಲ್.ರಾಹುಲ್ ಗೆ ಗಾಯ
ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಕೆ.ಎಲ್.ರಾಹುಲ್ ಅವರ ಕೈ ಬೆರಳಿಗೆ ಏಟು ಬಿದ್ದ ಘಟನೆ ಸಂಭವಿಸಿದೆ. ಕೂಡಲೇ ಚಿಕಿತ್ಸೆ ನೀಡಲಾಯಿತು.
ಇದೇನೂ ಗಂಭೀರ ಸ್ವರೂಪದ ಗಾಯವಲ್ಲ ಎನ್ನಲಾಗಿದೆಯಾದರೂ, ಮುಂದಿನ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತೀಯ ತಂಡದಲ್ಲಿ ಗಾಯದ ಭೀತಿ ಎದುರಾಗಿದೆ.
LATEST NEWS
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
Published
59 minutes agoon
22/12/2024By
NEWS DESK3ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.
ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!
ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.
ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.
ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
LATEST NEWS
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
Published
1 hour agoon
22/12/2024ಮಂಗಳೂರು/ಕೋಲ್ಕತಾ: ದೇಗುಲಗಳ ಮೇಲೆ, ಹಿಂದೂಗಳ ಮೇಲೆ ಅಲ್ಲಿನ ಮ*ತಾಂಧರು ದಾಳಿ ನಡೆಸುತ್ತಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದು, ಇದೀಗ ನಿಷೇಧಿತ ಉ*ಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹ*ತ್ಯೆ ಮತ್ತು ರಸ್ತೆ ಕಾರಿಡಾರ್ ಸ್ಫೋ*ಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಕಳೆದ ಕೆಲ ಹಿಂದೆ ಪಶ್ಚಿಮ ಬಂಗಾಳ, ಕೇರಳ ಮತ್ತು ಅಸ್ಸಾಂನಲ್ಲಿ ಬಾಂಗ್ಲಾದೇಶ ಮೂಲದ ಅನ್ಸರ್ ಅಲ್ ಇಸ್ಲಾಂ ಸಂಘಟನೆಗೆ ಸೇರಿದ 8 ಶಂಕಿತ ಉ*ಗ್ರರನ್ನು ಬಂಧಿಸಲಾಗಿತ್ತು. ಈಶಾನ್ಯ ರಾಜ್ಯಗಳಲ್ಲಿನ ಪ್ರಮುಖ ಹಿಂದೂ ನಾಯಕರ ಹ*ತ್ಯೆಯ ಉದ್ದೇಶವನ್ನು ಉ*ಗ್ರರು ಹೊಂದಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದ ಸಿಲಿಗುರಿಗೆ ಈಶಾನ್ಯ ರಾಜ್ಯಗಳ ನಂಟು ಬೆಸೆಯುವ ‘ಚಿಕನ್ ನೆಕ್’ ಎಂದು ಕರೆಯಲಾಗುವ ಸಿಲಿಗುರಿ ಕಾರಿಡಾರ್ ರಸ್ತೆ ಸ್ಫೋ*ಟಗೊಳಿಸುವ ಮೂಲಕ ಇಡೀ ಪ್ರದೇಶದಲ್ಲಿ ಅ*ಸ್ಥಿರತೆ ಸೃಷ್ಟಿಸಲು ಯತ್ನಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಇದು ಈಶಾನ್ಯ ರಾಜ್ಯಗಳಿಗೆ ಭಾರತವನ್ನು ಬೆಸೆಯುವ ಏಕೈಕ ರಸ್ತೆ ಮಾರ್ಗವಾಗಿದೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವಧಿಯಲ್ಲಿ ನಡೆದಿದ್ದ ಬಾಂಗ್ಲಾ ಪ್ರಜೆಗಳ ಬಲವಂತದ ನಾ*ಪತ್ತೆ ಹಿಂದೆ ಭಾರತದ ಕೈವಾಡವಿದೆ ಎಂದು ಬಾಂಗ್ಲಾದ ಮಧ್ಯಂತರ ಸರ್ಕಾರ ರಚಿಸಿರುವ ಸಮಿತಿಯ ವರದಿ ಹೇಳಿದೆ. ಬಾಂಗ್ಲಾದ ಸುದ್ದಿ ಸಂಸ್ಥೆ, ಸಂಗ್ಬಾದ್ ಸಂಸ್ಥೆಯು ಬಲವಂತದ ನಾ*ಪತ್ತೆಯ ಕುರಿತಾದ ತನಿಖಾ ವರದಿಯನ್ನು ಉಲ್ಲೇಖಿಸಿ ವರದಿ ನೀಡಿದ್ದು, ‘ಬಾಂಗ್ಲಾದೇಶದ ಬಲವಂತದ ನಾ*ಪತ್ತೆ ಪ್ರಕರಣಗಳಲ್ಲಿ ಭಾರತೀಯರ ಪಾಲ್ಗೊಳ್ಳುವಿಕೆ ಸಾರ್ವಜನಿಕ ದಾಖಲೆಯ ವಿಷಯವಾಗಿದೆ. ಭಾರತದಲ್ಲಿ ಇನ್ನೂ ಬಂಧಿಯಾಗಿರುವ ಯಾವುದೇ ಬಾಂಗ್ಲಾದೇಶದ ನಾಯಕರನ್ನು ಗುರುತಿಸಲು ತಮ್ಮ ಪ್ರಯತ್ನಗಳನ್ನು ವಿಸ್ತರಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳಿಗೆ ಶಿಫಾರಸ್ಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಈ ಜಾಡು ಅನುಸರಿಸುವುದು ನ್ಯಾಯದ ವ್ಯಾಪ್ತಿಯನ್ನು ಮೀರುತ್ತದೆ’ ಎಂದು ತನಿಖಾ ಆಯೋಗದ ವರದಿ ಉಲ್ಲೇಖಿಸಿದೆ.
LATEST NEWS
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ಬಾರತೀಯ ಕಾರ್ಮಿಕರೊಂದಿಗೆ ಕುವೈತ್ನಲ್ಲಿ ಮೋದಿ ಸಂವಾದ
ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
ಕಾನ್ ಸ್ಟೆಬಲ್ ಮನೆಯಲ್ಲಿ ಭರ್ಜರಿ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು !
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್