Friday, August 19, 2022

ಬೆಳ್ಮಣ್ ; ಬೌಲಿಂಗ್ ಮಾಡುವ ವೇಳೆ ಕುಸಿದು ಬಿದ್ದು ಯುವಕ ಸಾವು

ಉಡುಪಿ : ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೋರ್ವ ಕುಸಿದುಬಿದ್ದ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ನಂದಳಿಕ ಗ್ರಾಮದ ಮಾವಿನ ಕಟ್ಟೆ ಮೈದಾನದಲ್ಲಿ ನಿನ್ನೆ ಸಂಜೆ ನಡೆದಿದೆ.

ಹಾಳೆಕಟ್ಟೆ ನಿವಾಸಿ 27 ವರ್ಷದ ಸುಕೇಶ್  ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಿನ್ನೆ ಸಂಜೆ ಎಂದಿನಂತೆ ಸ್ನೇಹಿತರೊಂದಿಗೆ ಕ್ರಿಕೆಟ್ ಆಟ ಆಡುತ್ತಿದ್ದಾಗ ಬೌಲಿಂಗ್ ಮಾಡುವ ವೇಳೆ ಕುಸಿದ್ದು ಬಿದ್ದಿದ್ದರು.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ ಅದಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಮೃತ ಸುಕೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.

ಮೃತರು ತಂದೆ ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....