Connect with us

    BANTWAL

    ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಿದ ಬಂಟ್ವಾಳದ ಯುವಕರು

    Published

    on

    ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ.

    ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್‌ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ.

    ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ ಗೃಷ್ಣೇಶ್ವರ, ಭೀಮಾಶಂಕರ, ತ್ರ್ಯಂಬಕೇಶ್ವರ ಜ್ಯೋತಿರ್ಲಿಂಗ ಕ್ಷೇತ್ರಗಳ ದರ್ಶನ ಮಾಡಿ ಮುಂದೆ ಗುಜರಾತ್‌ನ ನಾಗೇಶ್ವರ, ಸೋಮನಾಥ ಜ್ಯೋತಿರ್ಲಿಂಗ ಕ್ಷೇತ್ರಗಳಿಗೆ ತೆರಳಿದ್ದಾರೆ. ಜತೆಗೆ ಎಲ್ಲೋರ, ದ್ವಾರಕಾ, ಏಕತಾ ವಿಗ್ರಹ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

    ಇದಕ್ಕಾಗಿ ತಲಾ 14 ಸಾವಿರ ರೂ. ಖರ್ಚಾಗಿದೆ. 1 ದಿನಗಳ ಪ್ರವಾಸದಲ್ಲಿ ಊಟ-ಉಪಾಹಾರವನ್ನು ಇವರೇ ತಯಾರಿಸಿದ್ದಾರೆ. ಇದಕ್ಕಾಗಿ ದಿನಸಿ ಸಾಮಾನು, ಗ್ಯಾಸ್, ಪಾತ್ರೆಗಳನ್ನು ಜತೆಯಲ್ಲಿ ಕೊಂಡೊಯ್ದಿದ್ದರು.

    ಇವರಿಬ್ಬರೂ ಬಾಲ್ಯ ಸ್ನೇಹಿತರಾಗಿದ್ದು, ಈ ಹಿಂದೆ ಆಟೋ ರಿಕ್ಷಾದ ಮೂಲಕ ಅನಂತಪುರ, ಚಾರ್ಮಾಡಿ ಮೊದಲಾದ ಭಾಗಗಳಿಗೆ ಸಾಕಷ್ಟು ಬಾರಿ ತೆರಳಿದ್ದರು. ಆದರೆ ಇಷ್ಟು ದೂರದ ಪ್ರವಾಸವನ್ನು ಇದೇ ಮೊದಲ ಬಾರಿಗೆ ಕೈಗೊಂಡಿದ್ದರು.

    BANTWAL

    ಕಾರು-ಲಾರಿ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ವ್ಯಕ್ತಿ ಗಂಭೀ*ರ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.

     

    ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

    ಪ್ರೀತಿಗಾಗಿ ಪೀಡಿಸಿದ ಅನ್ಯಮತೀಯ ಯುವಕ ಪೊಲೀಸ್ ವಶಕ್ಕೆ..!

    ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    BANTWAL

    ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಪ್ರಯಾಣಿಕರು ಗಂಭೀ*ರ

    Published

    on

    ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಆ.16ರಂದು ಮುಂಜಾನೆ ಸಂಭವಿಸಿದೆ.

    ಬಸ್ಸು ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ, ಆದರೆ ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿನ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.  ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

    Continue Reading

    LATEST NEWS

    Trending