bengaluru
ಪಿಜಿ ಗರ್ಲ್ಸ್ ‘ಬಿ ಕೇರ್‌ಫುಲ್’: ಸ್ನಾನ ಮಾಡೋ ದೃಶ್ಯ ಸೆರೆಹಿಡಿದು ಟಾರ್ಚರ್-ಸೆಕ್ಸ್ ಆಫರ್ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ
ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್‌ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಕಾಮುಕ.
ಯುವತಿಯ ಹೆಸರಿನಲ್ಲಿ ಪೊಲೀಸರೇ ಸೆಕ್ಸ್ ಆಫರ್ ಕೊಟ್ಟು ಸಿನಿಮೀಯ ರೀತಿಯಲ್ಲಿ ಇವನನ್ನು ಅರೆಸ್ಟ್ ಮಾಡಿದ್ದಾರೆ.
ಹತ್ತನೇ ತರಗತಿ ಪಾಸು ಮಾಡಿಕೊಂಡಿದ್ದ ಈತ ಪಾಂಡಿಚೆರಿ ಮೂಲದವನು. ಕಳೆದ 4 ವರ್ಷಗಳಿಂದ ಬೊಮ್ಮನಹಳ್ಳಿಯ ಪಿಜಿಯಲ್ಲೇ ನೆಲೆಸಿದ್ದ ಆತ, ಆ ಪಿಜಿ ಮಾಲೀಕನೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡಿದ್ದ. ಆ ಪಿಜಿ ಕಟ್ಟಡಕ್ಕೆ ಹೊಂದಿಕೊಂಡೇ ಮಹಿಳೆಯರ ಪಿಜಿ ಇದ್ದು, ಎರಡು ಪಿಜಿಗಳಿಗೆ ಒಬ್ಬನೇ ಮಾಲೀಕ.
ಹೀಗಾಗಿ ಮಹಿಳೆಯರ ಪಿಜಿಯಲ್ಲಿ ಏನಾದರೂ ಕೆಲಸಗಳಿದ್ರೆ, ತಾನೇ ಮುಂದೆ ನಿಂತು ಮಾಡಿಸುತ್ತಿದ್ದ. ಇದರಿಂದ ಲೇಡಿಸ್ ಪಿಜಿಯಲ್ಲಿ ಕೂಡಾ ನಿರಾತಂಕವಾಗಿ ಆರೋಪಿ ಓಡಾಡಲು ಮಾಲೀಕನೇ ಅವಕಾಶ ಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೇ ದುರ್ಬಳಕೆ ಮಾಡಿಕೊಂಡ ನಿರಂಜನ್ ಮಹಿಳೆಯರಿಲ್ಲದ ಹೊತ್ತಿನಲ್ಲಿ ಪಿಜಿಗೆ ತೆರಳಿ ಸ್ನಾನ ಗೃಹ, ಬೆಡ್ ರೂಂ ಹಾಗೂ ಇತರೆ ಸ್ಥಳಗಳನ್ನು ಪರಿಶೀಲಿಸಿದ್ದ. ಬಳಿಕ ಯುವತಿಯರು ಸ್ನಾನ ಮಾಡುವಾಗ ಎಲ್ಲಿಂದ ವಿಡಿಯೋ ರೆಕಾರ್ಡ್ ಮಾಡಿದ್ರೆ ಯಾರಿಗೂ ತಿಳಿಯುವುದಿಲ್ಲವೆಂದು ಸಂಚು ರೂಪಿಸಿ ತಾನು ವಾಸವಿದ್ದ ಪಿಜಿಯ ಟೆರೇಸ್ ಮೇಲಿಂದ ಪಕ್ಕದ ಲೇಡಿಸ್ ಪಿಜಿಯಲ್ಲಿದ್ದ ಯುವತಿಯರ ಚಲನವಲನದ ಮೇಲೆ ಕಣ್ಣಿಟ್ಟಿದ್ದ.
ಆಗ ಯಾರಾದರೂ ಯುವತಿ ಸ್ನಾನ ಮಾಡಲು ಪಿಜಿಯ ಹೊರಗೆ ಒಣ ಹಾಕಿದ್ದ ಟವಲನ್ನು ತೆಗೆದುಕೊಂಡ ಕೂಡಲೇ ಆರೋಪಿ ಅಲರ್ಟ್ ಆಗಿ ಕೂಡಲೇ ತನ್ನ ಪಿಜಿಯ ಮಹಡಿಯಿಂದ ಲೇಡಿಸ್ ಪಿಜಿಯ ಮಹಡಿಗೆ ಜಿಗಿದು ನೀರಿನ ಪೈಪನ್ನು ಹಿಡಿದುಕೊಂಡು ಸ್ನಾನ ಗೃಹದ ಕಿಟಕಿಯ 1.5 ಅಡಿ ಎತ್ತರದ ಸಜ್ಜಾ ಮೇಲೆ ಕುಳಿತುಕೊಳ್ಳುತ್ತಿದ್ದ.
ಅಲ್ಲಿಂದ ಮೊಬೈಲನ್ನು ತೂಗು ಬಿಟ್ಟು ಕಿಟಕಿ ಮೂಲಕ ಸ್ನಾನ ಮಾಡುತ್ತಿದ್ದ ಯುವತಿಯರ ನಗ್ನ ದೃಶ್ಯವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ. ಅಲ್ಲದೆ ಆಕೆಯ ಫೋಟೋ ಸಹ ತೆಗೆದು ಬಳಿಕ ಲೇಡಿಸ್ ಪಿಜಿ ರಿಜಿಸ್ಟರ್ ನಲ್ಲಿ ಆ ಯುವತಿಯರ ಮೊಬೈಲ್ ನಂಬರ್ ತೆಗೆದುಕೊಂಡು ಚಾಟಿಂಗ್ ಆರಂಭಿಸುತ್ತಿದ್ದ.
ಬಹು ಕಿಲಾಡಿಯಂತೆ ಯೋಚಿಸುತ್ತಿದ್ದ ನಿರಂಜನ್ ತನ್ನ ಬಗ್ಗೆ ಯಾರಿಗೂ ತಿಳಿಯಬಾರದೆಂದು ತನ್ನ ಮೊಬೈಲ್‌ನಲ್ಲಿ ಓಇಘಿಖಿ PಐUS ಎಂಬ ಆ್ಯಪನ್ನು ಇನ್‌ಸ್ಟಾಲ್ ಮಾಡಿಕೊಂಡು ಆ್ಯಪ್‌ಗೆ ತನ್ನ ಇಮೇಲ್ ಐಡಿ ಮೂಲಕ ನೋಂದಾಯಿಸಿಕೊಂಡಿದ್ದ. ಆಗ ಸ್ಥಳೀಯ ಮೊಬೈಲ್ ಸಂಖ್ಯೆಯನ್ನು ವಿದೇಶಿ ಸಂಖ್ಯೆಯಾಗಿ ಪರಿವರ್ತಿಸಿ +1(747)222-8960 ಎಂಬ ನಂಬರನ್ನು ಪಡೆದು ಆ ನಂಬರ್‌ನಿಂದ ಯುವತಿಯರನ್ನು ಸಂಪರ್ಕಿಸುತ್ತಿದ್ದ.
ತಾನು ಸೆರೆ ಹಿಡಿದ ನಗ್ನ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವುದಾಗಿ ಯುವತಿಯರಿಗೆ ಬೆದರಿಕೆ ಹಾಕುತ್ತಿದ್ದ. ಇದಕ್ಕೆ ಬೆದರಿದ ಯುವತಿಯರನ್ನು ಲಾಡ್ಜ್ ಅಥವಾ ಇತರೆ ಸ್ಥಳಗಳಿಗೆ ಕರೆಸಿ ಲೈಂಗಿಕವಾಗಿ ಬಳಕೆ ಮಾಡಿಕೊಡಿರುವುದು ತನಿಖೆಯಿಂದ ದೃಢಪಟ್ಟಿದೆ.
ಇತ್ತೀಚೆಗೆ ತಾನು ನೆಲೆಸಿದ್ದ ಪಿಜಿಯಲ್ಲಿ ಯುವತಿಯರು ಸ್ನಾನಕ್ಕೆ ಹೋದಾಗ ಅಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್ ಮಾಡಿಕೊಂಡು ಬಳಿಕ ಮೊಬೈಲ್‌ಗೆ ಅನಾಮಧೇಯ ಸಂದೇಶ ಕಳುಹಿಸಿ ಲೈಂಗಿಕತೆಗೆ ಒತ್ತಾಯಿಸಿದ್ದ.
ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದ ಇನ್‌ಸ್ಪೆಕ್ಟರ್ ಎಸ್.ಟಿ ಯೋಗೇಶ್ ನೇತೃತ್ವದ ತಂಡವು, ಯುವತಿ ಹೆಸರಿನಲ್ಲಿ ತಾವೇ ಯುವಕನಿಗೆ ಚಾಟಿಂಗ್ ಮಾಡಿದ್ದಾರೆ. ಬಳಿಕ ಸೆಕ್ಸ್ಗೆ ಒಪ್ಪಿಕೊಂಡಿರುವುದಾಗಿ ಆಫರ್ ಕೊಟ್ಟು ಕಾಮುಕನನ್ನ ಖೆಡ್ಡಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.
bengaluru
ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.
ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.
ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
bangalore
SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!
ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.
ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.
ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.
ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.
ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.
ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.
ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.
ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.
ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.
‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.
ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.
ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.
ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.
ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.
bengaluru
ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ ಪುತ್ತಿಗೆ ಶ್ರೀಗಳ 50 ನೇ ಚಾತುರ್ಮಾಸ್ಯ ಸಂಭ್ರಮ
ಬೆಂಗಳೂರು: ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ 78 ದಿನಗಳ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರ 50ನೇ ಚಾತುರ್ಮಾಸ್ಯ ವೈಭವದಿಂದ ಸಮಾಪನಗೊಂಡಿತು.
ಪೂಜ್ಯ ಶ್ರೀಗಳ ಚಾತುರ್ಮಾಸ್ಯ ಕಾರ್ಯದ ನಡುವೆಯೂ ಕೋಟಿ ಕೋಟಿ ಗೀತಾ ಲೇಖನ ಯಜ್ಞದ ಕುರಿತಾಗಿ ವಿಶೇಷ ಕಾರ್ಯಕ್ರಮಗಳು ಬೆಂಗಳೂರಿನ ವಿವಿಧ ಕಡೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪೂಜ್ಯ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಈ ಚಾತುರ್ಮಾಸ್ಯದ ಸಮಾರೋಪ, ಸನ್ಯಾಸ ಸ್ವೀಕಾರ ಮಾಡಿದ 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮದಿಂದ ಜರುಗಿತು.
ವೇದಮಂತ್ರಗಳ ಘೋಷಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭಾವೀ ಪರ್ಯಾಯ ಮಠದ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಆಶೀರ್ವಚನವನ್ನು ನೀಡಿದರು. ವಿದ್ವಾನ್ ಮಾಲಗಿ ರಾಮಾಚಾರ್ಯರು, ವಿದ್ವಾನ್ ಕೇಶವ ಬಾಯಿರಿ ಅವರು ಶ್ರೀಗಳನ್ನು ಮಾಲಾರ್ಪಣೆ ಮಾಡಿದರು.
ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸರಕಾರದ ಪರವಾಗಿ ಶುಭ ಹಾರೈಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುಗುಣೇಂದ್ರ ಶ್ರೀಗಳು ಅವರು ಪ್ರಸಿದ್ಧಿಯನ್ನು ಮಾಡಿದ್ದಾರೆ. ಧರ್ಮದ ಕೈಂಕರ್ಯವನ್ನು ಮಾಡಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅವರು ಕಾರ್ಯಕ್ರಮ ಮಾಡಿದ್ದಾರೆ ಎಂದು ಅಭಿನಂದಿಸಿದರು.
ನಿಮಿಷದ ಬಳಿಕ ಖ್ಯಾತ ಚಲನಚಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮಾತನಾಡಿ, ಇದೊಂದು ಎಲ್ಲರೂ ಸಂಭ್ರಮ ಪಡಬೇಕಾದ ವಿಚಾರವಾಗಿದೆ. ನಮ್ಮ ತಾಯಿ ಉಡುಪಿಯವಾಗಿದ್ದು, ಕೃಷ್ಣ ಮಠ ತುಂಬಾ ಹತ್ತಿರ. ಕೃಷ್ಣನ ಪರವಾಗಿ ಒಂದು ಚಿತ್ರ ಮಾಡಬೇಕೆಂಬ ಆಸೆಯನ್ನು ಶ್ರೀಗಳಲ್ಲಿ ಅರಿಕೆ ಮಾಡಿದ್ದೇನೆ ಎಂದರು.
ಇದೇ ಸಂದರ್ಭ ಶ್ರೀಗಳು ಭಕ್ತರಿಂದ ವಿಶೇಷ ಪೂಜೆಯನ್ನು ನೆರವೇರಿಸಿಕೊಂಡರು.
ಎಲ್ಲಾ ಭಕ್ತರೂ ಸೇರಿ ನನ್ನನ್ನು ಹರಸಿದ್ದೀರಿ. ಶ್ರೀ ಕೃಷ್ಣನ ಪೂಜಾ ಕಾರ್ಯ ಮಾಡಲು ಸಿಕ್ಕಿರುವುದು ಪುಣ್ಯಫಲ. ಭಕ್ತರು ನನಗೆ ಅರ್ಪಣೆ ಮಾಡಿದ ಎಲ್ಲವನ್ನೂ ನಾವು ಶ್ರೀಕೃಷ್ಣನಿಗೆ ಸಮರ್ಪಣೆ ಮಾಡಿದ್ದೇವೆ.
ನೀವು ಕೊಟ್ಟ ಸುವರ್ಣ ಅಭಿಷೇಕ ಸಂಕಲ್ಪ ಮಾಡಿದ ಸುವರ್ಣ ರಥಕ್ಕೆ ಅರ್ಪಣೆ ಮಾಡುತ್ತೇವೆ ಎಂದರು. ಎಲ್ಲಾ ಸಮಿತಿಯ ಭಕ್ತರಿಗೂ ಕೃಷ್ಣ ಭಗವದ್ಗನುಗ್ರಹ ಮಾಡಲಿ ಎಂದು ಹರಸಿದರು.
ಬಳಿಕ ಶ್ರೀಗಳು ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಸ್ ಅಹಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಭಕ್ತರಾದ ಮಂಜುನಾಥ ಹೆಗಡೆ, ಹಯಗ್ರೀವ ಆಚಾರ್ಯರು, ಸಮಿತಿ ಸದಸ್ಯ ಯು ಬಿ ವೆಂಕಟೇಶ್, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಸಿಒಒ ಕದ್ರಿ ನವನೀತ್ ಶೆಟ್ಟಿ ಸಹಿತ ಗಣ್ಯಾತಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಜನವರಿ 18ರಿಂದ ಶ್ರೀಗಳ ಪರ್ಯಾಯ ಮಹೋತ್ಸವ ಆರಂಭವಾಗಲಿದೆ.