Wednesday, December 1, 2021

ಕೇರಳದಲ್ಲಿ ಹೆಚ್ಚುತ್ತಿದೆ ಝೀಕಾ : ಕರ್ನಾಟದಲ್ಲಿ ಮನೆಮಾಡಿದೆ ಆತಂಕ..!

ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ.

ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ.

ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಮತ್ತು 16 ವರ್ಷದ ಬಾಲಕಿಗೆ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಝಿಕಾ ವೈರಸ್ ಪ್ರಕರಣಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಜುಲೈ 9ರಂದು ಕೇರಳದಲ್ಲಿ ಝಿಕಾ ವೈರಸ್‌ನ ಮೊದಲ ಪ್ರಕರಣ ದೃಢಪಟ್ಟಿತ್ತು.

ಈ ರೋಗವು ಸೊಳ್ಳೆಗಳಿಂದ ಹರಡಲಿದೆ ಎಂದು ತಿಳಿದು ಬಂದಿದೆ. ರೋಗದ ಲಕ್ಷಣಗಳು ಸಾಮಾನ್ಯವಾಗಿದೆ.

ಜ್ವರ, ಚರ್ಮ ಸಂಬಂಧಿ ಕಾಯಿಲೆಗಳು, ಸ್ನಾಯು-ಕೀಲು ನೋವು, ಸುಸ್ತು, ತಲೆನೋವು ಕಂಡು ಬರುತ್ತದೆ.

ಈಗಾಗಲೇ ಕೋವಿಡ್​ನಿಂದ ತತ್ತರಿಸಿರುವ ಜನತೆಗೆ ಝಿಕಾ ಮತ್ತೊಂದು ಆಘಾತ ನೀಡಿದೆ.

ಕೇರಳದಲ್ಲಿ ಹೆಚ್ಚುತ್ತಿರುವ ಝೀಕಾ ವೈರಸ್ ಪ್ರಕರಣಗಳು ಕರ್ನಾಟಕದ ನಿದ್ದೆ ಕೆಡಿಸಿದೆ. ಈಗಾಗಲೇ ಕೊರೊನಾ 2 ನೇ ಅಲೆಯಿಂದ ಇನ್ನೂ ಪೂರ್ಣವಾಗಿ ಚೇತರಿಸದ ಕರ್ನಾಟಕವನ್ನು ಆತಂಕಕ್ಕೆ ದೂಡಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗುತ್ತಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...