DAKSHINA KANNADA
ಉಗ್ರಗಾಮಿಗಳನ್ನು ವಧಿಸಿದ ವೀರ ಯೋಧ ಝುಬೇರ್ ನೇರಂಕಿಗೆ ಸನ್ಮಾನ.!,
ಉಗ್ರಗಾಮಿಗಳನ್ನು ವಧಿಸಿದ ವೀರ ಯೋಧ ಝುಬೇರ್ ನೇರಂಕಿಗೆ ಸನ್ಮಾನ.!,
ಮಂಗಳೂರು: ದೇಶದ ಗಡಿಯಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿ ಎದುರಿಸಿದ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಇಬ್ಬರು ಉಗ್ರಗಾಮಿಗಳನ್ನು ಕೊಂದ ವೀರಯೋಧ ಝುಬೇರ್ ನೇರೆಂಕಿ ಅವರನ್ನು ಟೀಮ್ ಬಿ ಹ್ಯೂಮನ್ ಹಾಗೂ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನಿಂದ ಮಂಗಳೂರಿನ ಕಂಕನಾಡಿಯ ವಿಶ್ವಾಸ್ ಕ್ರೌನ್‌ನ ಟ್ಯಾಲೆಂಟ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು
ಸನ್ಮಾನ ಸ್ವೀಕರಿಸಿ ಮಾತನಾಡಿದ ವೀರಯೋಧ ಝುಬೇರ್ ನೇರೆಂಕಿ, ೨೦೧೮ರ ಫೆಬ್ರವರಿಯ ಘಟನೆಯು ಬಹಳ ಮಹತ್ವದ್ದು. ಒಂದೂವರೆ ದಿನಗಳ ಕಾಲ ಕಾರ್ಯಾಚರಣೆ ನಡೆಸಿದೆವು. ವೈರಿಗಳನ್ನು ನಾಶಪಡಿಸುವಲ್ಲಿ ಯಶಸ್ವಿಯಾದೆವು ಎಂದರು.
ಯುವಕರು ಪಬ್‌ಜಿ ಆಡುವುದು, ಗಾಂಜಾ ಡ್ರಗ್ಸ್‌ನ್ನು ಹಿಂಬಾಲಿಸುವ ಬದಲು ಮಹಾತ್ಮರನ್ನು, ಸಾಧಕರ ತತ್ವಗಳನ್ನು ಅನುಸರಿಸಿದರೆ ದೇಶಕ್ಕೆ ಕೊಡುಗೆ ನೀಡಬಹುದಾಗಿದೆ. ಆಯಾ ಪ್ರದೇಶದಲ್ಲಿ ದೇಶಭಕ್ತಿ ಹೆಚ್ಚಿಸುವ ಹಾಗೂ ಸೌಹಾರ್ದ ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಯು.ಟಿ. ಖಾದರ್ ಮಾತನಾಡಿ ಸೈನಿಕರಿಗೆ ಹಬ್ಬಗಳಿಲ್ಲ. ಎಲ್ಲರಂತೆ ಕುಟುಂಬದೊಂದಿಗೆ ಕುಳಿತು ಊಟ ಮಾಡಲು ಆಗಲ್ಲ. ಜೀವವನ್ನು ಪಣಕ್ಕಿಟ್ಟು ಗಡಿ ಕಾಯುವುದು ಸವಾಲಿನ ಕೆಲಸವಾಗಿದೆ.
ವೀರಯೋಧ ಝುಬೇರ್ ನೇರೆಂಕಿ ಕಾರ್ಯ ಶ್ಲಾಘನೀಯ. ರಾಜ್ಯದ ಎಲ್ಲರಿಗೂ ಝುಬೇರ್ ಮಾದರಿಯಾಗಿದ್ದಾರೆ ಎಂದರು., ದೇಶಕ್ಕಾಗಿ ಸೇವೆ ಸಲ್ಲಿಸಲು ಧೈರ್ಯವಿರಬೇಕು. ಅದು ಎಲ್ಲರಲ್ಲೂ ಇರುತ್ತದೆ. ಇದಕ್ಕೆ ದೃಢ ಮನಸ್ಸಿರಬೇಕು. ಝುಬೇರ್ ಅವರ ಸೇವೆಯನ್ನು ಇಡೀ ರಾಜ್ಯವೇ ಶ್ಲಾಘಿಸಲಿದೆ. ಎಲ್ಲ ಯುವಕರಿಗೆ ಝುಬೇರ್ ಆದರ್ಶರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಕ್ಸ್‌ಪರ್ಟೈಜ್ ಕಾಂಟ್ರಾಕ್ಟಿಂಗ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶೇಕ್ ಕರ್ನಿರೆ, ವೈಟ್ ಸ್ಟೋನ್ ಕೆಎಸ್‌ಎ ವ್ಯವಸ್ಥಾಪಕ ನಿರ್ದೇಶಕ ಶರೀಫ್ ಬೋಳಾರ್, ಡೀಲ್ಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಅಹ್ಮದ್ ಬಾವ ಟೀಮ್ ಬಿ ಹ್ಯೂಮನ್‌ನ ಅಧ್ಯಕ್ಷ ಆಸಿಫ್ ಡೀಲ್ಸ್ ಸಮಾಜ ಸೇವಕ ರಫೀಕ್ ಮಾಸ್ಟರ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಅಧ್ಯಕ್ಷ ರಿಯಾಜ್ ಕಣ್ಣೂರು, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಣ್ಣೂರು,ಟೀಮ್ ಬಿ ಹ್ಯೂಮನ್‌ನ ಅಧ್ಯಕ್ಷ ಆಸಿಫ್ ಡೀಲ್ಸ್ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್