Connect with us

    ಮಂಗಳೂರಿನಲ್ಲಿ ಎಸ್‌ಡಿಪಿಐಯಿಂದ ಗಾಂಧಿಯ ಹಂತಕರು, ದೇಶದ ಹಂತಕರು ಎಂಬ ಘೋಷಣೆಯೊಂದಿಗೆ ಪ್ರತಿಭಟನೆ

    Published

    on

    ಮಂಗಳೂರು: ಸ್ವತಂತ್ರ ಭಾರತದ ಮೊತ್ತ ಮೊದಲ ಭಯೋತ್ಪಾದನಾ ಕೃತ್ಯವಾದ ಗಾಂಧೀಜಿಯನ್ನು ಹತ್ಯೆಗೈದ ದಿನದ ಪ್ರಯುಕ್ತ ದೇಶದಾದ್ಯಂತ ಎಸ್‌ಡಿಪಿಐ ವತಿಯಿಂದ `ಗಾಂಧಿಯ ಹಂತಕರು ದೇಶದ ಹಂತಕರು” ಎಂಬ ಘೋಷಣೆ ಯೊಂದಿಗೆ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು ಇದರ ಅಂಗವಾಗಿ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಪುರಭವನದ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಯಿತು.

    ಪ್ರತಿಭಟನಾ ಸಭೆಯ ನೇತೃತ್ವವನ್ನು ವಹಿಸಿದ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ಗಾಂಧಿಯ ಹತ್ಯೆಯನ್ನು ನಡೆಸಿದ ನಾಥೂರಾಮ್ ಗೋಡ್ಸೆಯ ಸಂತತಿಗಳ ಘೋರ ಕೃತ್ಯವನ್ನು ಖಂಡಿಸಿದರು ಹಾಗೂ ಇಂತಹ ಕೃತ್ಯಗಳು ಮತ್ತೆ ದೇಶದಾಧ್ಯಂತ ಸಂಘಪರಿವಾರದಿಂದ ಮರುಕಳಿಸುತ್ತಿದೆ ಇದರ ವಿರುಧ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.

     ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಕೆ. ಮಾತನಾಡಿ ಮಹಾತ್ಮ ಗಾಂಧೀಜಿಯವರ ಹತ್ಯೆ ಸ್ವಾತಂತ್ರ ಭಾರತದ ಪ್ರಥಮ ಭಯೋತ್ಪಾದಕ ಕೃತ್ಯವಾಗಿದೆ. ನಾಥೂರಾಮ್ ಗೋಡ್ಸೆ ಎಂಬ ಭಯೋತ್ಪಾದಕ ನಮಸ್ಕರಿಸುವ ರೀತಿಯಲ್ಲಿ ನಾಟಕವಾಡಿ ಅಹಿಂಸೆಯ ಪ್ರತಿಪಾದಕ ಸ್ವಾತಂತ್ರಕ್ಕೆ ಬೇಕಾಗಿ ನೇತೃತ್ವವನ್ನು ಕೊಟ್ಟ ರಾಷ್ಟ್ರಪಿತ ಗಾಂಧೀಜಿಯನ್ನು ಹತ್ಯೆಗೈದನು. ಅದೇ ಸಂತತಿಗಳು ಇಂದು ದೇಶದ ಆಡಳಿತವನ್ನು ಹಿಡಿದು ದೇಶವನ್ನೇ ದಿವಾಳಿ ಮಾಡುತ್ತಿದೆ ಎಂದು ಹೇಳಿದರು.

    ನಂತರ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಗಾಂಧೀಜಿಯ ಹತ್ಯೆಯನ್ನು ನಡೆಸಿದ ದೇಶದ್ರೋಹಿ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಮತ್ತು ಅವರ ಸಂತತಿಗಳ ಈ ಘೋರ ಕೃತ್ಯವನ್ನು ಮರೆಯಲು ಖಂಡಿತ ಸಾಧ್ಯವಿಲ್ಲ. ಇದೀಗ ದೇಶವನ್ನೇ ಎನ್.ಆರ್.ಸಿ, ಸಿ.ಎ.ಎ ಮತ್ತು ಎನ್.ಪಿ.ಆರ್ ಎಂಬ ಕರಾಳ ಖಾಯಿದೆಯನ್ನು ಜಾರಿಗೆ ತಂದು ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜ್ಯಾತ್ಯಾತೀತ ಮೌಲ್ಯವನ್ನು ಕೊಲ್ಲುವಂತಹ ಷಡ್ಯಂತರಕ್ಕೆ ಕೈ ಹಾಕಿದ್ದಾರೆ ಎಂದರು.

    ಪ್ರತಿಭಟನಾ ಸಭೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರಾಧ್ಯಕ್ಷ ಸುಹೈಲ್ ಫಳ್ನೀರ್, ಮ.ನ.ಪಾ ಕಾರ್ಪರೇಟರ್ ಮುನೀಬ್ ಬೆಂಗರೆ, ಝಾಹಿದ್ ಮಲಾರ್, ಅಬ್ಬಾಸ್ ಕೀನ್ಯ, ಆಶಿಫ್ ಕೋಟೆಬಾಗಿಲು, ಅಝರ್ ಚೊಕ್ಕಬೆಟ್ಟು,ಮೊಯಿದ್ದೀನ್ ಹಳೆಯಂಗಡಿ ಮೊದಲಾದವರು ಉಪಸ್ಥಿತರಿದ್ದರು.

    ವಿಡಿಯೋಗಾಗಿ..

    Click to comment

    Leave a Reply

    Your email address will not be published. Required fields are marked *

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

    Published

    on

    ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್‌ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.

    ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್‌.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

     

    Continue Reading

    DAKSHINA KANNADA

    ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    Published

    on

    ಮಂಗಳೂರು : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌  ಬಂಧಿತರು.  ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್‌ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್‌ನ ಸಹಕಾರದಲ್ಲಿ ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಂಡು  ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು

    ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.

    Continue Reading

    LATEST NEWS

    Trending