Connect with us

ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ 

Published

on

ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ 

ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅದೇ ರೀತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ಅಶಕ್ತ ಕಲಾವಿದರ ಶ್ರೇಯೋಭಿವೃದ್ಧಿಗೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಟ್ಲ ಸತೀಶ ಶೆಟ್ಟಿ ಅವರ ಸಮಾಜ ಮುಖಿ ಸೇವೆಯನ್ನು ಪರಿಗಣಿಸಿ, ಫೆ.2ರಂದು ಬೆಂಗಳೂರಿನ ಸೃಷ್ಟಿ ಕಲಾವಿದ್ಯಾಲಯ ದಶಮಾನದ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಆರ್.ವಿ.ದಂತ ಮಹಾವಿದ್ಯಾಲಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೃಷ್ಟಿ ಕಲಾ ವಿದ್ಯಾಲಯ ಸಂಸ್ಥಾಪಕ ಛಾಯಾಪತಿ ಕಂಚಿಬೈಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲಾ ಲೋಕಕ್ಕೆ ತಮ್ಮನ್ನು ಅರ್ಪಿಸಿಕೊಂಡು ಕಲಾದೇವಿಯನ್ನು ಆರಾಧಿಸುತ್ತಿರುವ ಕಲಾವಿದರಿಗೆ ಸೃಷ್ಟಿ ಕಲಾಭೂಷಣ ಹಾಗೂ ಸೃಷ್ಟಿ ಕಲೋಪಾಸಕ ಪ್ರಶಸ್ತಿಯನ್ನು ನೀಡಿ ಸತ್ಕರಿಸಲಾಗುತ್ತದೆ.
ದೊಡ್ಢೇ ರಂಗೇಗೌಡ, ವಿದ್ಯಾಭೂಷಣ, ರಮೇಶ್ಚಂದ್ರ, ಅರ್ಚನಾ ಉಡುಪ ಮುಂತಾದ ಮಹನೀಯರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಈ ಬಾರಿ ಸೃಷ್ಟಿ ಕಲಾಬಂಧು ಪ್ರಶಸ್ತಿಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಶ್ರೀಕಾಂತ್ ರಾವ್ ಜೆ. ಅವರಿಗೆ ನೀಡಲಾಗುವುದು. ಜಾದೂಗಾರ್ ಪ್ರಹ್ಲಾದ್ ಆಚಾರ್ಯ ಅವರಿಗೆ ಸೃಷ್ಟಿ ಕಲೋಪಾಸಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ದಶಮಾನ ಹಬ್ಬದಲ್ಲಿ ಯಕ್ಷಗಾನ, ಕಥಕ್ ನೃತ್ಯ, ಕಲರಿಯಪಟ್ಟು, ಶಾಡೋ ಪ್ಲೇ, ಡೊಳ್ಳು ಕುಣಿತ, ಕರ್ನಾಟಕ ಸಂಗೀತ ನಡೆಯಲಿದೆ.

ದಶಮಾನ ಹಬ್ಬದ ಪ್ರಯುಕ್ತ ಸಂಗೀತ ಹಬ್ಬ, ವಾದನ ಹಬ್ಬ, ಭರತ ನಾಟ್ಯ ಹಬ್ಬ, ಚಿತ್ರಕಲಾ ಹಬ್ಬ ನಗೆ ಹಬ್ಬ, ಯಕ್ಷಗಾನ ಹಬ್ಬ, ಸಿನಿಮೀ ನೃತ್ಯ ಹಬ್ಬ, ಸನ್ಮಾನ ಹಬ್ಬ, ಜಾನಪದ ಹಬ್ಬ, ಕಲಾ ಸಂಗಮ ಹಬ್ಬ ನಡೆಯಲಿದೆ.

ಸ್ನೇಹಜ್ಯೋತಿ ಅನಾಥಾಶ್ರಮ, ಶ್ರೀಶಂಕರಾಚಾರ್ಯ ವಿದ್ಯಾ ಪೀಠ ಆಶ್ರಮದ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಮತ್ತು ವೇದಿಕೆ ಕಲ್ಪಿಸುವ ಮೂಲಕ ಅವರಿಗೆ ನೈತಿಕ ಮತ್ತು ಆರ್ಥಿಕ ಬೆಂಬಲ ನೀಡುತ್ತಿದ್ದೇವೆ.

ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರತಿ ವರ್ಷ ಸಾವಿರ ಗಿಡ ನೆಡುವ ಮೂಲಕ ಪರಿಸರ ಕಾಳಜಿ, ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಜಿತೇಂದ್ರ ಕುಂದೇಶ್ವರ, ಶ್ರೀಲೋಕಾಭಿರಾಮ ವ್ಯವಸ್ಥಾಪಕ ಸಂಪಾದಕ ಶಂಕರ ಮೂರ್ತಿ ಕಾಯರಬೆಟ್ಟು ಇದ್ದರು.

ವಿಡಿಯೋ..

Click to comment

Leave a Reply

Your email address will not be published. Required fields are marked *

LATEST NEWS

ನಡುರಸ್ತೆಯಲ್ಲಿ ಗರ್ಭಿಣಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ದುಷ್ಕರ್ಮಿಗಳು..!

Published

on

ಮಧ್ಯಪ್ರದೇಶ: ದರೋಡೆ ಮಾಡಲು ಬಂದವರು ನಡುರಸ್ತೆಯಲ್ಲಿ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

pregnant death

ಮೊದಲು ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ, ಬಳಿಕ ಗರ್ಭಿಣಿಯನ್ನು ಆಕೆಯ ಸೀರೆಯಿಂದಲೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಧೋಟಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಕಾಜರವಾರದ ನಿವಾಸಿ ಶುಭಂ ಚೌಧರಿ ಅವರು ಪತ್ನಿ ರೇಷ್ಮಾ ಹಾಗೂ ಒಂದೂವರೆ ವರ್ಷದ ಪುತ್ರನೊಂದಿಗೆ ವಾಕಿಂಗ್‌ಗೆ ತೆರಳಿದ್ದರು.

ಪಟ್ಬಾಬಾದಿಂದ ಹಿಂದಿರುಗಿದ ನಂತರ, ಮದರ್ ತೆರೆಸಾ ನಗರದಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗಲು ಬೊಲೆರೋ ಕಾರಿನಲ್ಲಿ ಹೊರಟಿದ್ದಾಗ, ದಾರಿಯಲ್ಲಿ 3-4 ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಆಗ ಪ್ರತಿಭಟಿಸಲು ಮುಂದಾದ ಮಹಿಳೆಯನ್ನು ಹತ್ಯೆ ಮಾಡಿ ಬಳಿಕ ಆಕೆಯ ಪತಿಯನ್ನೂ ಥಳಿಸಿದ್ದಾರೆ. ಶುಭಂ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಇನ್ನು ಶೂಭಂ ತಲೆಗೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಪತ್ನಿಯ ಮಂಗಳಸೂತ್ರವನ್ನು ದೋಚಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಮಾಧೋಳ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮುಂದೆ ಓದಿ..; ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

ಶುಭಂ ಅವರ ಬೊಲೆರೋ ದುಷ್ಕರ್ಮಿಗಳಿಗೆ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಿವಾದಗಳುಂಟಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಈ ದುರಂತ ನಡೆದಿರಬಹುದೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ಸಾವಿನ ಮರಣೋತ್ತರ ಪರೀಕ್ಷಾ ವರದಿ ಬಳಿಕ ಸಾವಿಗೆ ಕಾರಣ ತಿಳದು ಬರಬೇಕಿದೆ ಎಂದು ಮಧೋಳ ಠಾಣೆ ಪ್ರಭಾರಿ ವಿಪಿನ್ ತಾಮ್ರಕರ ಹೇಳಿದ್ದಾರೆ.

 

Continue Reading

LATEST NEWS

ಮತ್ತೆ ಬಂತು ಅಕ್ಷಯ ತೃತೀಯ; ಆಚರಣೆಯ ಮಹತ್ವವೇನು?

Published

on

ಮಂಗಳೂರು : ಭಾರತೀಯ ಹಿಂದೂ ಸಂಪ್ರದಾಯದಲ್ಲಿ ‘ಅಕ್ಷಯ ತೃತೀಯ’ಕ್ಕೆ ವಿಶೇಷ ಸ್ಥಾನವಿದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ವರ್ಷ ಮೇ 10 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಸಂಪತ್ತಿನ ಅಧಿದೇವತೆ ಲಕ್ಷ್ಮೀ ಆರಾಧನೆ ಈ ದಿನ ನಡೆಯುತ್ತದೆ.


ಪೌರಾಣಿಕ ಹಿನ್ನೆಲೆ :

ಅಕ್ಷಯ ತೃತೀಯ ಆಚರಣೆಯ ಹಿಂದೆ ಹಲವು ಪೌರಾಣಿಕ ಹಿನ್ನೆಲೆ ಇದೆ. ಭಗವಾನ್ ವಿಷ್ಣುವಿನ ಪರಶುರಾಮ ಅವತಾರ ಈ ದಿನವೇ ಆಗಿದ್ದು ಎಂಬ ನಂಬಿಕೆಯಿದೆ.
ಕೃಷ್ಣ ಯುಧಿಷ್ಠಿರನಿಗೆ ಅಕ್ಷಯ ಪಾತ್ರೆ ನೀಡಿದ್ದು ಇದೇ ದಿನ ಎಂಬ ನಂಬಿಕೆ ಇದೆ. ಈ ಅಕ್ಷಯ ಪಾತ್ರೆಯಲ್ಲಿ ಆಹಾರ ಖಾಲಿಯಾಗದು ಎಂಬ ಕಥೆಯೂ ಇದೆ. ಹಾಗಾಗಿ ಅಕ್ಷಯ ತೃತೀಯದಂದೂ ದಾನ ಧರ್ಮಕ್ಕೆ, ದಾನಕ್ಕೆ ವಿಶೇಷ ಪ್ರಾಶಸ್ತ್ಯವಿದೆ. ತಾಯಿ ಅನ್ನಪೂರ್ಣೆಯ ಜನ್ಮದಿನವೂ ಅಕ್ಷಯ ತೃತೀಯಾದಂದೇ ಆಗಿದೆ ಎಂದು ಹೇಳಲಾಗಿದೆ.


ಇನ್ನು ಅಕ್ಷಯ ತೃತೀಯದಂದು ತ್ರೇತಾಯುಗ ಆರಂಭವಾಯಿತು ಎಂದೂ ಹೇಳಲಾಗಿದೆ. ಗಂಗೆಯೂ ಭೂಮಿಗಿಳಿದ ದಿನ ಎಂಬುದಾಗಿಯೂ ಹೇಳಲಾಗಿದೆ. ಭಗೀರಥ ರಾಜನು ಗಂಗಾಮಾತೆಯನ್ನು ಭೂಮಿಗೆ ಇಳಿಸಲು ಸಾವಿರಾರು ವರ್ಷಗಳ ಕಾಲ ತಪಸ್ಸು ಮಾಡಿದ್ದನು. ಹಾಗಾಗಿ ಅಕ್ಷಯ ತೃತೀಯದಂದು ಗಂಗಾ ಸ್ನಾನ ಮಾಡುವುದರಿಂದ ಎಲ್ಲಾ ಪಾಪಗಳು ನಾಶವಾಗುತ್ತವೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ : ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಮಹತ್ವವೇನು?

ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ. ಈ ದಿನದಂದು ಉತ್ತಮ ಕೆಲಸಗಳನ್ನು ಮಾಡುವುದರಿಂದು ಜೀವನದಲ್ಲಿ ಏಳಿಗೆ ಕಾಣಬಹುದು ಎಂಬ ನಂಬಿಕೆಯಿದೆ. ಈ ದಿನ ದಾನ ಧರ್ಮ ಮಾಡಿದರೆ ಉತ್ತಮ ಎನ್ನಲಾಗುತ್ತದೆ. ಹಾಗಾಗಿಯೇ ಹಲವರು ದಾನ ಧರ್ಮದಲ್ಲಿ ತೊಡಗಿಕೊಳ್ಳುತ್ತಾರೆ.

ಈ ದಿನ ಹೊಸ ವಸ್ತುಗಳನ್ನು ಖರೀದಿಸುವಲ್ಲಿ ಜನ ಮುಗಿ ಬೀಳುತ್ತಾರೆ. ಅದರಲ್ಲೂ ಚಿನ್ನಕ್ಕೆ ಬಲು ಬೇಡಿಕೆಯಿದೆ. ಆಭರಣ ಮಳಿಗೆಗಳು ತುಂಬಿ ತುಳುಕುತ್ತವೆ. ಈ ದಿನ ಆಭರಣ ಖರೀದಿ ಮಾಡಿದಲ್ಲಿ ‘ಅಕ್ಷಯ’ವಾಗಲಿದೆ ಎಂಬ ನಂಬಿಕೆ ಜನರದು. ಲಕ್ಷ್ಮೀಯನ್ನು ಆರಾಧಿಸಲಾಗುತ್ತದೆ. ಆಕೆ ಒಲಿದರೆ ಸಂಪತ್ತು ವೃದ್ಧಿಯಾಗುತ್ತದೆ. ಹಾಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತದೆ.

ಈ ಬಾರಿಯ ಅಕ್ಷಯ ತೃತೀಯ ಸಮಯ :


ಅಕ್ಷಯ ತೃತೀಯ ಶುಕ್ರವಾರ, ಮೇ 10 ರಂದು ಬೆಳಗ್ಗೆ 4:17 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮೇ 11 ರಂದು 2:50 AM ಕ್ಕೆ ಕೊನೆಗೊಳ್ಳುತ್ತದೆ. ಅಕ್ಷಯ ತೃತೀಯದ ಶುಭ ಸಮಯವು ಮೇ 10 ರಂದು ಬೆಳಗ್ಗೆ 5:49 ರಿಂದ ಮಧ್ಯಾಹ್ನ 12:23 ರ ನಡುವೆ ಇರುತ್ತದೆ. ಅಕ್ಷಯ ತೃತೀಯದ ಶುಭ ಸಮಯದಲ್ಲಿ ಮಾಡುವ ಪ್ರತಿಯೊಂದು ಕೆಲಸವೂ ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ.

Continue Reading

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

LATEST NEWS

Trending