Connect with us

    LATEST NEWS

    ಲೋಕಕಲ್ಯಾಣಾರ್ಥ ಸುಂದರಕಾಂಡ ಹವನ..

    Published

    on

    ಮಂಗಳೂರು : ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರದ ಚಾತುರ್ಮಾಸವು ಪ್ರಾರಂಭಗೊಂಡಿದ್ದು ಲೋಕಕಲ್ಯಾಣಾರ್ಥ ಮೂರೂ ದಿನಗಳ ಪರ್ಯಂತ ಶ್ರೀ ದೇವಳದಲ್ಲಿ ಸುಂದರಕಾಂಡ ಹವನವು ನಡೆಯಿತು ಇಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು .

    ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್, ಪಂಡಿತ್ ನರಸಿಂಹ ಆಚಾರ್ಯ , ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ ಆರ್ ಭಟ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು .
    ಚಿತ್ರ : ಮಂಜು ನೀರೇಶ್ವಾಲ್ಯ

    FILM

    ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ ಆತ್ಮಹ*ತ್ಯೆ ಯತ್ನ; ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ

    Published

    on

    ಮಂಗಳೂರು/ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ  ಟೆಕ್ನಿಷಿಯನ್ ಸಂತೋಷ್ ಆತ್ಮಹ*ತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.


    ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ ನಿಗದಿ ಮಾಡಿ ಕಲ್ಟ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ನ.25 ರಂದು ಚಿತ್ರದುರ್ಗದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಸಂದರ್ಭ ವಿಂಡ್ ಫ್ಯಾನ್‌ಗೆ ಟಚ್ ಆಗಿ ಡ್ರೋನ್ ತುಂಡಾಗಿತ್ತು. ಆದರೆ, ಚಿತ್ರತಂಡ ನಷ್ಟ ತುಂಬಿಸಿಲ್ಲ ಎಂಬುದು ಸಂತೋಷ್ ಆರೋಪ.

    ಇದನ್ನೂ ಓದಿ : ಪತ್ನಿಯನ್ನು ಹನಿಮುನ್‌ಗೆ ಕರೆದೊಯ್ದು ಮಾರಿದ ಪಾ*ಪಿ ಪತಿ !! ಮುಂದೇನಾಯ್ತು…..

    ಚಿತ್ರತಂಡದ ಬಳಿ ಕೇಳಿದರೂ ಪ್ರಯೋಜನವಾಗಿಲ್ಲ. ನಷ್ಟ ಪರಿಹಾರ ನೀಡದೆ ಒಂದುವರೆ ಲಕ್ಷ ರೂಪಾಯಿ ಬೆಲೆಯ ಮೆಮೊರಿ ಕಾರ್ಡ್ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ. ಇದರಿಂದ ಸಂತೋಷ್ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತೋಷ್ ಸಹೋದರಿ ಮಾಗಡಿ ರೋಡ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಫೆಂಗಲ್ ಚಂಡಮಾರುತ ಭೀತಿ; ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

    Published

    on

    ಮಂಗಳೂರು/ಚೆನ್ನೈ  :  ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸುಮಾರು ಮೂರು ದಿನಗಳ ಬಳಿಕ ಇದೀಗ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದೆ. ಅದು ಉತ್ತರ ತಮಿಳುನಾಡು – ಪುದುಚೇರಿ ಕರಾವಳಿಯತ್ತ ಸಾಗುತ್ತಿದ್ದು, ಇಂದು(ನ.30) ಅಪ್ಪಳಿಸುವ ಸಾಧ್ಯತೆಯಿದೆ. ಹಾಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

    ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಂಡಮಾರುತವು ವಾಯುವ್ಯಕ್ಕೆ 15 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದು, ನಾಗಪಟ್ಟಣಂನ ಪೂರ್ವ-ಈಶಾನ್ಯಕ್ಕೆ 240 ಕಿ.ಮೀ, ದೂರ, ಪಾಂಡಿಚೇರಿಯ ಪೂರ್ವ-ಆಗ್ನೇಯಕ್ಕೆ 230 ಕಿ.ಮೀ. ದೂರ ಹಾಗೂ ಚೆನ್ನೈನಿಂದ ಆಗ್ನೇಯಕ್ಕೆ 250 ಕಿ.ಮೀ. ದೂರ ಕೇಂದ್ರೀಕೃತವಾಗಿದೆ.

    ತೀವ್ರ ಚಂಡಮಾರುತವಾಗಿ ಗಂಟೆಗೆ 70 ರಿಂದ 80 ಕಿ.ಮೀ. ವೇಗದಲ್ಲಿ ಹಾಗೂ ಚಂಡಮಾರುತ ನೆಲೆಯಾಗುವ ಸಮಯದಲ್ಲಿ ಗಂಟೆಗೆ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಪಾಂಡಿಚೇರಿಗೆ ಸಮೀಪದಲ್ಲಿರುವ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    7 ಜಿಲ್ಲೆಗಳಿಗೆ ರೆಡ್ ಅಲರ್ಟ್ :

    ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು ಮತ್ತು ಪಾಂಡಿಚೇರಿ, ಚೆನ್ನೈ ಸೇರಿದಂತೆ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಇತರ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮ ಕರ್ನಾಟಕದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು,  ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

    ಇದನ್ನೂ ಓದಿ : ಪತ್ನಿಯನ್ನು ಹನಿಮುನ್‌ಗೆ ಕರೆದೊಯ್ದು ಮಾರಿದ ಪಾ*ಪಿ ಪತಿ !! ಮುಂದೇನಾಯ್ತು…..

    ಕರ್ನಾಟಕ ಕರಾವಳಿಯಲ್ಲಿ ಮುಂದಿನ 3 ದಿನಗಳಿಗೆ ಎಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಡಿಸೆಂಬರ್‌ 1,2, 3 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ ಕರಾವಳಿಯ ಗ್ರಾಮೀಣ ಭಾಗಗಳಲ್ಲಿ ರಾತ್ರಿ ವೇಳೆ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ವಾತಾವರಣ ಇರುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    Continue Reading

    LATEST NEWS

    ಹುಲ್ಲು ತರಲು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶ*ವವಾಗಿ ಪತ್ತೆ; ಚಿರತೆ ದಾ*ಳಿ ಶಂಕೆ

    Published

    on

    ಉಡುಪಿ : ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಮನೆಯ ಎದುರಿನ ಗುಡ್ಡದಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ  ನಡೆದಿದೆ‌. ಅವರ ಮೃತದೇಹ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾ*ಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

    ಸರಳೇಬೆಟ್ಟುವಿನ ನೆಹರು ನಗರ ನಿವಾಸಿ ಪುಷ್ಪಾ ನಾಯ್ಕ್ (66) ಮೃ*ತಪಟ್ಟವರು. ಅವರು‌ ಗುರುವಾರ(ನ.28) ಸಂಜೆ ಹಸುಗಳಿಗೆ ಹುಲ್ಲು ತರಲು ಮನೆಯ ಎದುರಿನ ಗುಡ್ಡಕ್ಕೆ ತೆರಳಿದ್ದರು. ಬಳಿಕ ಎಷ್ಟೇ ಹೊತ್ತಾದರೂ ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಇದನ್ನು ಗಮನಿಸಿದ ಮನೆಯವರು ನೆರೆಮನೆಯವರ ಜೊತೆಗೂಡಿ ಗುಡ್ಡದಲ್ಲಿ ಹುಡುಕಾಡಿದ್ದಾರೆ. ಆದರೆ ಪುಷ್ಪ ನಾಯ್ಕ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಶುಕ್ರವಾರ(ನ.29) ಬೆಳಿಗ್ಗೆ ಮನೆ ಎದುರು ಗುಡ್ಡೆಯಲ್ಲಿ ಪುಷ್ಪಾ ನಾಯ್ಕ್ ಶ*ವ ಪತ್ತೆಯಾಗಿದೆ.‌ ಅವರ ಕುತ್ತಿಗೆಯ ಭಾಗದಲ್ಲಿ ಗಾಯಗಳಾಗಿದ್ದು, ಕೈಗಳಿಗೂ ಪರಚಿದ ಗಾ*ಯಗಳಾಗಿವೆ ಎಂದು ಪುತ್ರ ಗಣೇಶ್ ನಾಯ್ಕ್ ತಿಳಿಸಿದ್ದಾರೆ.

    ಇದನ್ನೂ ಓದಿ : ಆರ್‌ಸಿಬಿಗೆ ರಾಜ್ಯ ಸರ್ಕಾರದಿಂದ ಎಚ್ಚರಿಕೆ !

    ಈ ಭಾಗದಲ್ಲಿ ಚಿರತೆ ಹಾ*ವಳಿ ಕೂಡ ಹೆಚ್ಚಾಗಿದೆ. ಹೀಗಾಗಿ ಚಿರತೆ ದಾ*ಳಿಯಿಂದ ಮೃ*ತಪಟ್ಟಿದ್ದಾರೆಯೋ‌ ಅಥವಾ ಇನ್ಯಾವುದೋ ಕಾರಣದಿಂದ ಮೃ*ತಪಟ್ಟಿದ್ದಾರೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

     

    Continue Reading

    LATEST NEWS

    Trending